ಹನುಮನ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಾಣ: ಸಿಎಂ ಬೊಮ್ಮಾಯಿ

posted in: ರಾಜ್ಯ | 0

ಧಾರವಾಡ: ಹನುಮನ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟದ ಮೇಲೆ ಗಾಳಿ ಗೋಪುರ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಭಾನುವಾರ ಹುಬ್ಬಳ್ಳಿಯ ಗೋಕುಲದಲ್ಲಿ ಜೀರ್ಣೋದ್ಧಾರ ವಾಗಿರುವ ದಾರಾವತಿ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿ ಹನುಮಂತ ದೇವರ ಆಶೀರ್ವಾದ ಪಡೆದ ನಂತರ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಹನುಮ ಜನಿಸಿದ್ದು ಕರ್ನಾಟಕದಲ್ಲಿ. ಆತ ಜನಿಸಿದ ಹೊಸಪೇಟೆಯ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಈ ಸಾಲಿನ ಬಜೆಟ್‌ನಲ್ಲಿ 100 ಕೋಟಿ ರೂ.ಗಳ ಅನುದಾನ ಮೀಸಲಿಡಲಾಗಿದೆ. ಬೆಟ್ಟಕ್ಕೆ ರೋಪ್ ವೇ , ಕ್ಷೇತ್ರಕ್ಕೆ ಭೇಟಿ ನೀಡುವ ಜನರ ಅನುಕೂಲಕ್ಕಾಗಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.

advertisement

ಅಯೋಧ್ಯೆಯಲ್ಲಿ ಶ್ರೀರಾಮನ ದೇವಾಲಯ ನಿರ್ಮಿಸಲಾಗುತ್ತಿದ್ದರೆ, ಇಲ್ಲಿ ಆಂಜನೇಯನ ದೇವಸ್ಥಾನದ ಅಭಿವೃದ್ಧಿಯಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಸಂಕಲ್ಪ ಪುರುಷರು. ಹಲವಾರು ವರ್ಷಗಳು ಆಗದಿದ್ದ ಅಭಿವೃದ್ಧಿಯನ್ನು ಭಾರತ ದೇಶದಲ್ಲಿ ಸಾಧ್ಯವಾಗಿಸಿದ್ದಾರೆ. ಅವರ ಪ್ರಯತ್ನದಿಂದಾಗಿ ಅಯೋಧ್ಯೆಯಲ್ಲಿ ಸರ್ವರಿಗೂ ಒಪ್ಪಿಗೆಯಾಗುವ ರೀತಿಯಲ್ಲಿ ಶ್ರೀರಾಮನ ದೇವಸ್ಥಾನ ಅದ್ಭುತವಾಗಿ ನಿರ್ಮಾಣವಾಗುತ್ತಿದೆ. ಕಾಶಿ ವಿಶ್ವನಾಥನ ಅಭಿವೃದ್ಧಿಯನ್ನು ನಾವು ಅಲ್ಲಿಗೆ ಭೇಟಿ ನೀಡಿಯೇ ನೋಡಬೇಕು ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಶಾಸಕ ಅರವಿಂದ ಬೆಲ್ಲದ, ಹು- ಧಾ ಮಾಜಿ ಮೇಯರ ಅನಿಲಕುಮಾರ ಪಾಟೀಲ, ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಕಾಂಗ್ರೆಸ್ ಮುಖಂಡ ರಜತ ಉಳ್ಳಾಗಡ್ಡಿ ಮಠ ಮೊದಲಾದವರಿದ್ದರು.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ನಾಳೆಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ ಆರಂಭ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement