ನೂತನ ಮುಖ್ಯ ಚುನಾವಣಾ ಆಯುಕ್ತ ರಾಜೀವಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ: ಭಾರತದ 25ನೇ ಮುಖ್ಯ ಚುನಾವಣಾ  ಆಯುಕ್ತರಾಗಿ ರಾಜೀವಕುಮಾರ್‌  ಅವರು ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಮುಖ್ಯ ಚುನಾವಣಾ ಆಯುಕ್ತರಾಗಿದ್ದ ಸುಶೀಲಚಂದ್ರ ನಿವೃತ್ತರಾದ ನಂತರ ಅವರ ಸ್ಥಾನಕ್ಕೆ ರಾಜೀವಕುಮಾರ್‌ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಮಾಹಿತಿ ನೀಡಿದ್ದಾರೆ.

ಮುಖ್ಯ ಚುನಾವಣಾ ಆಯಕ್ತರಾಗಿ ರಾಜೀವಕುಮಾರ್‌ ತಮ್ಮ ಅಧಿಕಾರವಧಿಯಲ್ಲಿ ಹಿಮಾಚಲ ಪ್ರದೇಶ, ಗುಜರಾತ್‌, ರಾಜಸ್ಥಾನ, ಛತೀಸ್‌ಘಡ, ಮಧ್ಯಪ್ರದೇಶ, ಕರ್ನಾಟಕ, ಮೇಘಾಲಯ, ತೆಲಂಗಾಣ, ಮಿಜೋರಾಂ ಮತ್ತು ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಗಳನ್ನು ಮತ್ತು 2024 ರ ಲೋಕಸಭಾ ಚುನಾವಣೆಗಳನ್ನು ನಡೆಸಿಕೊಡಲಿದ್ದಾರೆ..
2020ರಲ್ಲಿ ಹಣಕಾಸು ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅವರು ಅದಕ್ಕೂ ಮೊದಲು ಚುನಾವಣಾ ಆಯುಕ್ತರಾಗಿ, ಕೇಂದ್ರ ಮತ್ತು ರಾಜ್ಯ ಮಟ್ಟದ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.

 

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement