ಪಿಎಸ್ಐ ಅಭ್ಯರ್ಥಿಗಳಿಂದ ಪ್ರಧಾನಿಗೆ ರಕ್ತದಲ್ಲಿ ‘ಉಗ್ರ’ ಸಂದೇಶ..! ಆ ಪತ್ರದಲ್ಲಿ ಏನಿದೆ?

posted in: ರಾಜ್ಯ | 0

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ತಪ್ಪು ಎಸಗಿದವರಿಂದಾಗಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ. ಪ್ರಾಮಾಣಿಕರಿಗೆ ನ್ಯಾಯ ಸಿಗದ ಹಿನ್ನೆಲೆಯಲ್ಲಿ ನೊಂದ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಬರೆದಿದ್ದಾರೆ ಎಂದು ಹೇಳಲಾದ ಪತ್ರವೊಂದು ವೈರಲ್ ಆಗಿದೆ.
ನ್ಯಾಯ ದೊರಕದೇ ಇದ್ದಲ್ಲಿ ಉಗ್ರ ಮತ್ತು ನಕ್ಸಲ್ ಸಂಘಟನೆ ಸೇರುವುದಾಗಿ ಈ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಸುಮಾರು ಎರಡು ಪುಟಗಳಿರುವ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಬರೆದಿದ್ದಾರೆ.

advertisement

ಎಂಟು ಮಂದಿ ಸೇರಿ ಈ ಪತ್ರ ಬರೆದಿರುವುದಾಗಿ ಉಲ್ಲೇಖಿಸಲಾಗಿದೆ. ತಪ್ಪು ಮಾಡಿದವರನ್ನು ಶಿಕ್ಷಿಸಿ ಜೈಲಿಗಟ್ಟಿ. ಆದರೆ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸಾದವರು ಅನಗತ್ಯ ತೊಂದರೆ ಎದುರಿಸುವಂತಾಗಿದೆ. ಈ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ಎಷ್ಟೇ ಹೋರಾಟ ಮಾಡಿದರೂ ಸರ್ಕಾರ ಸೊಪ್ಪು ಹಾಕುತ್ತಿಲ್ಲ. ತಕ್ಷಣ ನಮಗೆ ನ್ಯಾಯ ಒದಗಿಸಬೇಕೆಂದು ಪತ್ರದಲ್ಲಿ ಹೇಳಲಾಗಿದೆ. ಈ ಪತ್ರವನ್ನು ರಕ್ತದಲ್ಲಿ ಬರೆಯಲಾಗಿದ್ದು, ಒಂದು ವೇಳೆ ನ್ಯಾಯ ಕೊಡಿಸದೇ ಇದ್ದಲ್ಲಿ ಮುಂದೆ ಟೆರರಿಸ್ಟ್‌ಗಳೊಂದಿಗೆ ನಾವು ಕೈ ಜೋಡಿಸುತ್ತೇವೆ ಎಂದು ಉಲ್ಲೇಖಿಸಲಾಗಿದೆ.

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಹಣ ಇದ್ದವರಿಗೆ ಎಂಬ ವ್ಯವಸ್ಥೆ ಬಂದು ಬಿಟ್ಟಿದೆ. ಸರ್ಕಾರದ ಈ ವ್ಯವಸ್ಥೆಯಿಂದಾಗಿ ನಾವು ಮಾನಸಿಕವಾಗಿ ಸತ್ತಿದ್ದೇವೆ. ಇನ್ನು ಸರ್ಕಾರಿ ಹುದ್ದೆ ಪರೀಕ್ಷೆ ಬರೆಯುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ನಮಗೆ ಅಪಾರ ಗೌವರವಿದೆ. ತನಿಖೆ ಮಾಡಿ ನ್ಯಾಯಾ ಕೋಡಿಸುತ್ತಾರೆ ಎನ್ನುವ ನಂಬಿಕೆ ಇದೆ. ಒಂದು ವೇಳೆ ನ್ಯಾಯಕೊಡಿಸದಿದ್ದರೆ ಬದಲಾಗಿ ಟೆರರಿಸ್ಟ್, ನಕ್ಸಲೈಟ್‌ ಸಂಘಟನೆ ಜೊತೆ ಸೇರಲು ಇಚ್ಛಿಸಿದ್ದೇವೆ. ಅವರ ಬಳಿ ಹಣ ಪಡೆದು ಬಡ ಕುಟುಂಬಕ್ಕೆ ನಾವು ಸಹಾಯ ಮಾಡುತ್ತೇವೆ ಎಂದು ಪತ್ರದಲ್ಲಿ ಬರೆಯಲಾಗಿದೆ.ಆದರೆ ಈ ಪತ್ರದಲ್ಲಿ ಯಾವುದೇ ಅಭ್ಯರ್ಥಿಗಳ ಹೆಸರು ನಮೂದಿಸಿಲ್ಲ. ಎಂಟು ಮಂದಿ ಇದ್ದೇವೆ. ನಾವೆಲ್ಲರೂ ಈ ನಿರ್ಧಾರ ಮಾಡಿದ್ದೇವೆ ಎಂದು ಬರೆಯಲಾಗಿದೆ. ನಿಜವಾಗಿಯೂ ಇದು ನೊಂದ ಅಭ್ಯರ್ಥಿಗಳೇ ಬರೆದಿರುವುದೇ ಅಥವಾ ಇತರರು ಈ ರೀತಿ ಬರೆದು ವೈರಲ್ ಮಾಡಿದ್ದಾರೆಯೇ ಎಂಬುದು ಗೊತ್ತಾಗಿಲ್ಲ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   'ಅಸಾಧಾರಣ' ಗಾಯಕ, ಕನ್ನಡದ ಮನೆ ಮಾತಾಗಿದ್ದರು : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement