ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್ ಪಂತ್ ಸೇರಿ ಐವರು IPS ಅಧಿಕಾರಿಗಳು, 37 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಮಾಡಿದ ಸರ್ಕಾರ

posted in: ರಾಜ್ಯ | 0

ಬೆಂಗಳೂರು: ರಾಜ್ಯ ಸರ್ಕಾರ ಐದು ಐಪಿಎಸ್‌ ಅಧಿಕಾರಿಗಳು ಹಾಗೂ 37 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ ಪಂತ್‌ ( Kamal Panth ) ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಕಮಲ ಪಂತ್‌ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.ಕಾನೂನೂ ಮತ್ತು ಸುವ್ಯವಸ್ಥೆ ಹೆಚ್ಚುವರಿ ಡಿಜಿಪಿಯಾಗಿದ್ದ ಸಿ ಹೆಚ್ ಪ್ರತಾಪ್ ರೆಡ್ಡಿ ಅವರನ್ನು ನೂತನ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಕೆ ಎಸ್ ಆರ್ ಪಿಯ ಹೆಚ್ಚುವರಿ ಡಿಜಿಪಿಯಾಗಿದ್ದ ಅಲೋಕಕುಮಾರ್ ಅವರನ್ನು, ಕಾನೂನು ಸುವ್ಯವಸ್ಥೆ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಕ್ರೈಂ ಮತ್ತು ಟೆಕ್ನಿಕಲ್ ಸರ್ವಿಸ್ ಎಡಿಜಿಪಿಯಾಗಿದ್ದಂತ ಆರ್. ಹಿತೇಂದ್ರ ಅವರನ್ನು ಕೆಎಸ್ಆರ್‌ಪಿ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ.
ಕ್ರೈಂ ವಿಭಾಗದ ಡಿಸಿಪಿಯಾಗಿದ್ದ ಎಂ. ಎನ್. ಅನುಚೇತನ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಿಐಡಿಯ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಈ ಸ್ಥಾನದಲ್ಲಿದ್ದ ಟಿ. ವೆಂಕಟೇಶ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅಲ್ಲದೆ, ರಾಜ್ಯ ಸರ್ಕಾರ 37 ಪೊಲೀಸ್ ಇನ್ಸ್‌ಪೆಕ್ಟರ್ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಆಡಳಿತಾತ್ಮಕ ದೃಷ್ಠಿಯಿಂದ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ದೇವೇಗೌಡರ ಕುರಿತು ಆಕ್ಷೇಪಾರ್ಹ ಹೇಳಿಕೆ: ಕ್ಷಮೆಯಾಚಿಸಿದ ಕೆ.ಎನ್‌.ರಾಜಣ್ಣ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ