ಭಾರತದಿಂದ ರಫ್ತು ನಿಷೇಧದ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗೋಧಿ ಬೆಲೆ ದಾಖಲೆ ಏರಿಕೆ

ನವದೆಹಲಿ: ತೀವ್ರ ತಾಪಮಾನದಿಂದಾಗಿ ಗೋಧಿ ಉತ್ಪನ್ನದ ಮೇಲೆ ಪರಿಣಾಮದಿಂದ ಗೋಧಿ ರಫ್ತು ನಿಷೇಧಿಸಲು ಭಾರತ ನಿರ್ಧರಿಸಿದ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಸೋಮವಾರ ಗೋಧಿ ಬೆಲೆ ದಾಖಲೆಯ ಮಟ್ಟಕ್ಕೆ ಏರಿದೆ.
ಯುರೋಪ್ ಮಾರುಕಟ್ಟೆ ಸೋಮವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆ ಗೋಧಿ ಬೆಲೆ ಪ್ರತಿ ಟನ್‌ಗೆ 435 ಯುರೋಗಳಿಗೆ ($453) ಜಿಗಿದಿದೆ.
ಈ ಹಿಂದೆ ಜಾಗತಿಕ ರಫ್ತಿನ ಶೇಕಡ 12 ರಷ್ಟನ್ನು ಹೊಂದಿದ್ದ ಉಕ್ರೇನ್‌ನ ಮೇಲೆ ರಷ್ಯಾ ಆಕ್ರಮಣದ ನಂತರ ಜಾಗತಿಕವಾಗಿ ಗೋಧಿ ಬೆಲೆ ಗಗನಕ್ಕೇರಿತ್ತು.
ವಿಶ್ವದ ಎರಡನೇ ಅತಿದೊಡ್ಡ ಗೋಧಿ ಉತ್ಪಾದಕ ಭಾರತ ಮಾರ್ಚ್ ನಲ್ಲಿ ದಾಖಲೆಯ ಉಷ್ಣದ ಅಲೆಯಿಂದಾಗಿ ಗೋಧಿ ಉತ್ಪಾದನೆ ಮೇಲೆ ಪರಿಣಾಮ ಬೀರಿದ್ದರಿಂದ ರಫ್ತನ್ನು ನಿಷೇಧಿಸುತ್ತಿದೆ ಎಂದು ಕೇಂದ್ರ ಸರ್ಕಾರ ಶನಿವಾರ ಹೇಳಿತ್ತು.
ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ಆದ 1.4 ಶತಕೋಟಿ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸುತ್ತಿದೆ, ಆದರೆ ಭಾರತ ಗೋದಿ ರಫ್ತು ನಿಷೇಧಸಿತ್ತಿದ್ದಂತೆಯೇ ಜಾಗತಿಕ ಮಾರುಕಟ್ಟೆಯಲ್ಲಿ ಗೋಧಿ ಬೆಲೆ ದಿಢೀರ್‌ ಹೆಚ್ಚಳವಾಗಿದ್ದು, ಭಾರತದ ರಫ್ತು ನಿಷೇಧಕ್ಕೆ ಜಿ-೭ ರಾಷ್ಟ್ರಗಳು ಟೀಕಿಸಿವೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/
ಓದಿರಿ :-   ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ 4 ದಿನಗಳ ಪೊಲೀಸ್ ಕಸ್ಟಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ