ಕಾಶ್ಮೀರ್ ಫೈಲ್ಸ್ ಸಿನಿಮಾದಿಂದ ಜಮ್ಮು -ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಚೋದನೆ: ಮೆಹಬೂಬಾ ಮುಫ್ತಿ

ಜಮ್ಮು: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಭಯೋತ್ಪಾದನೆಗೆ ಪ್ರಚೋದನೆ ನೀಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಾಬೂಬಾ ಮುಫ್ತಿ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ವಾಸ್ತವ ಸಂಗತಿಯನ್ನು ಮುಚ್ಚಿಡುವ ಮೂಲಕ ಹಿಂದೂ-ಮುಸ್ಲಿಂರ ವಿವಾದವನ್ನಾಗಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಅಶ್ಮೀರದಲ್ಲಿ ನಾವು ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದ್ದೆವು. 2010, 2016 ರಲ್ಲಿ ಗರಿಷ್ಠ ಅಶಾಂತಿಯ ಸಂದರ್ಭದಲ್ಲಿ ಯಾವುದೇ ಹತ್ಯೆ ನಡೆದಿರಲಿಲ್ಲ ಎಂದು ಪ್ರತಿಪಾದಿಸಿದ್ದಾರೆ.
ಕಾಶ್ಮೀರ್ ಫೈಲ್ಸ್ ವಿವಾದ ಬಳಿಕ ಇದೀಗ ಜ್ಞಾನವಾಪಿ ಮಸೀದಿ ವಿಚಾರವನ್ನು ಮುನ್ನೆಲೆಗೆ ತರಲಾಗಿದೆ ಎಂದರು.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನಾಳೆ ಫಿಲಿಪ್ಪೀನ್ಸ್‌ಗೆ ʼಬ್ರಹ್ಮೋಸ್ ಕ್ಷಿಪಣಿʼಗಳ ಮೊದಲ ಸೆಟ್ ನೀಡಲಿದೆ ಭಾರತ

ನಿಮ್ಮ ಕಾಮೆಂಟ್ ಬರೆಯಿರಿ

advertisement