ಐವರು ನ್ಯಾಯಮೂರ್ತಿಗಳನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ಉನ್ನತೀಕರಿಸಲು ಸುಪ್ರೀಂಕೋರ್ಟ್‌ ಕೊಲಿಜಿಯಂ ಶಿಫಾರಸು

ನವದೆಹಲಿ: ಸುಪ್ರೀಂ ಕೋರ್ಟ್ ಕೊಲಿಜಿಯಂ ಮೇ 17ರಂದು ವಿವಿಧ ಹೈಕೋರ್ಟ್‌ಗಳ ಐವರು ನ್ಯಾಯಾಧೀಶರನ್ನು ಮುಖ್ಯ ನ್ಯಾಯಮೂರ್ತಿಗಳಾಗಿ ಉನ್ನತೀಕರಿಸಲು ಶಿಫಾರಸು ಮಾಡಿದೆ. ಅಲ್ಲದೆ, ಮುಖ್ಯ ನ್ಯಾಯಮೂರ್ತಿಯೊಬ್ಬರ ವರ್ಗಾವಣೆಗೂ ಶಿಫಾರಸು ಮಾಡಿದೆ.
ಕೊಲಿಜಿಯಂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಪಿನ್ ಸಂಘಿ ಅವರನ್ನು ಉತ್ತರಾಖಂಡದ ಮುಖ್ಯ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಶಿಫಾರಸು ಮಾಡಿದೆ. ಬಾಂಬೆ ಹೈಕೋರ್ಟಿನ ಇಬ್ಬರು ನ್ಯಾಯಮೂರ್ತಿಗಳಾದ ಅಮ್ಜದ್ ಎ. ಸಯೀದ್ ಮತ್ತು ಎಸ್.ಎಸ್. ಶಿಂಧೆ ಅವರನ್ನು ಕ್ರಮವಾಗಿ ಹಿಮಾಚಲ ಪ್ರದೇಶ ಮುಖ್ಯ ನ್ಯಾಯಮೂರ್ತಿ ಮತ್ತು ರಾಜಸ್ಥಾನದ ಮುಖ್ಯ ನ್ಯಾಯಮೂರ್ತಿಗಳಾಗಿ ಉನ್ನತೀಕರಿಸಲು ಶಿಫಾರಸು ಮಾಡಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಅಲ್ಲದೆ, ಗುಜರಾತ್ ಹೈಕೋರ್ಟ್ ನ್ಯಾಯಮೂರ್ತಿ ರಶ್ಮಿನ್ ಎಂ. ಛಾಯಾ ಅವರನ್ನು ಗುವಾಹತಿ ಮುಖ್ಯ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಹಾಗೂ
ತೆಲಂಗಾಣ ಹೈಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಉನ್ನತೀಕರಿಸಲು ಶಿಫಾರಸು ಮಾಡಲಾಗಿದೆ.
ಅಲ್ಲದೆ, ತೆಲಂಗಾಣದ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಲಾಗಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಸರ್ವೋಚ್ಚ ನ್ಯಾಯಾಲಯದ ಕೊಲಿಜಿಯಂಗೆ ಹಿರಿಯ ನ್ಯಾಯಮೂರ್ತಿಗಳಾದ ಯು.ಯು. ಲಲಿತ್, ಎ.ಎಂ. ಖಾನ್ವಿಲ್ಕರ್, ಡಿ.ವೈ. ಚಂದ್ರಚೂಡ್ ಮತ್ತು ಎಲ್.ನಾಗೇಶ್ವರ ರಾವ್ ಸದಸ್ಯರಾಗಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಕಾಳಿ ಸಿಗರೇಟ್ ಸೇದುತ್ತಿರುವುದನ್ನು ತೋರಿಸುವ ಸಾಕ್ಷ್ಯಚಿತ್ರದ ಪೋಸ್ಟರ್...!: ಹಿಂದೂ ದೇವತೆ ಅಪಮಾನಕ್ಕೆ ನಿರ್ಮಾಪಕಿ ಬಂಧನಕ್ಕೆ ಒತ್ತಾಯ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ