ಸುಗ್ರೀವಾಜ್ಞೆಗೆ ಬಿತ್ತು ರಾಜ್ಯಪಾಲರ ಅಂಕಿತ: ಮತಾಂತರ ನಿಷೇಧ ಈಗ ಕರ್ನಾಟಕದಲ್ಲಿ ಕಾನೂನು

posted in: ರಾಜ್ಯ | 0

ಬೆಂಗಳೂರು : ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದ್ದ ಮತಾಂತರ ನಿಷೇಧ ಕಾಯ್ದೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅಂತಿಮಮುದ್ರೆ ಒತ್ತಿದ್ದಾರೆ.
ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆಯನ್ನ ಪಾಸ್‌ ಮಾಡಿತ್ತು. ಈಗ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದರಿಂದ ಈಗ ಅದು ಕಾನೂನು ಆಗಿ ರಾಜ್ಯದಲ್ಲಿ ಜಾರಿಗೆ ಬರಲಿದೆ. ಈ ಮೂಲಕ ಕರ್ನಾಟಕವು ಮತಾಂತರ ವಿರೋಧಿ ಕಾನೂನು ಜಾರಿಗೆ ತಂದ 9ನೇ ರಾಜ್ಯವಾಗಿದೆ.

advertisement

2021ರ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಮಂಡನೆಯಾಗಿ ಅಂಗೀಕಾರಗೊಂಡಿತ್ತು. ಆದರೆ ವಿದಾನ ಪರಿಷತ್‌ನಲ್ಲಿ ಮಂಡನೆಯಾಗಿರಲಿಲ್ಲ. ಹೀಗಾಗಿ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮೇ 12ರಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಸಂಪುಟ ಸಭೆಯ ನಿರ್ಧಾರದಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆಯು ರವಾನಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕತ ಹಾಕಿದ್ದಾರೆ.

ಈ ವಿವಾದಾತ್ಮಕ ಕಾನೂನು “ಬಲಪ್ರಯೋಗ, ವಂಚನೆ, ಅನಗತ್ಯ ಪ್ರಭಾವ, ಬಲವಂತ, ಆಮಿಷ ಅಥವಾ ವಿವಾಹದ ಮೂಲಕ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರಗೊಳ್ಳುವುದನ್ನ” ನಿಷೇಧಿಸುತ್ತದೆ.
‘ಬಲವಂತದ’ ಮತಾಂತರಕ್ಕೆ 3-5 ವರ್ಷಗಳ ಜೈಲು ಶಿಕ್ಷೆ ಮತ್ತು 25,000 ರೂ.ಗಳ ದಂಡ ವಿಧಿಸಲು ಕಾನೂನಿನಲ್ಲಿ ಪ್ರಸ್ತಾಪಿಸಲಾಗಿದೆ. ಅಪ್ರಾಪ್ತ ವಯಸ್ಕ, ಮಹಿಳೆ ಅಥವಾ ಎಸ್ಸಿ/ಎಸ್ಟಿ ವ್ಯಕ್ತಿಯನ್ನ ಮತಾಂತರ ಮಾಡಿದರೆ 3-10 ವರ್ಷ ಜೈಲು ಶಿಕ್ಷೆ ಮತ್ತು 50,000 ರೂ.ಗಳು, ಸಾಮೂಹಿಕ ಮತಾಂತರಕ್ಕೆ 3-10 ವರ್ಷ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.
ಮತಾಂತರಗೊಳ್ಳಲು ಬಯಸುವ ಜನರು ಕನಿಷ್ಠ 60 ದಿನಗಳ ಮುಂಚಿತವಾಗಿ ಮತ್ತು ಮತಾಂತರದ ನಂತರ 30 ದಿನಗಳ ಒಳಗೆ ಜಿಲ್ಲಾಧಿಕಾರಿಗಳ ಮುಂದೆ ಘೋಷಣೆ ಮಾಡಬೇಕಾಗುತ್ತದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಲೋಕಾಯುಕ್ತ ದುರ್ಬಲಗೊಳಸಲು ರಾಜಕಾರಣಿಗಳಿಂದ ಒಳ ಒಪ್ಪಂದ, ಆದರೆ ಹೈಕೋರ್ಟ್‌ ತೀರ್ಪಿನಿಂದ ಲೋಕಾಯುಕ್ತಕ್ಕೆ ಬಲ : ಸಂತೋಷ್‌ ಹೆಗ್ಡೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement