ಕೆಎಸ್‌ಆರ್‌ಟಿಸಿಯಲ್ಲಿ ‘ನಿವೃತ್ತ ಚಾಲಕ’ರಿಗೆ ತಾತ್ಕಾಲಿಕ ಆಧಾರದ ಮೇಲೆ ಕೆಲಸಕ್ಕೆ ಸೇರಲು ಅವಕಾಶ

posted in: ರಾಜ್ಯ | 0

ಬೆಂಗಳೂರು: ಸಾರ್ವಜನಿಕ ಪ್ರಯಾಣಿಕರ ಅಗತ್ಯಕ್ಕನಗುಣವಾಗಿ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ, ಕೆಎಸ್ಆರ್‌ಟಿಸಿಯಿಂದ ನಿವೃತ್ತ ಚಾಲಕರನ್ನು ಮತ್ತೆ ನಿಯೋಜಿಸಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕರ್ತವ್ಯ ನಿರ್ವಹಿಸಲು ಆಸಕ್ತಿ ಇರುವ 63 ವರ್ಷ ವಯೋಮಿತಿ ಮೀರದ ನಿವೃತ್ತ ಚಾಲಕರು ಸೂಕ್ತ ದಾಖಲೆಯೊಂದಿಗೆ ವಿಭಾಗಿಯ ನಿಯಂತ್ರಣಾಧಿಕಾರಿಗಳಲ್ಲಿ ವರದಿ ಮಾಡಿಕೊಳ್ಳಲು ತಿಳಿಸಿದೆ.ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಪ್ರಕಟಣೆ ಹೊರಡಿಸಲಾಗಿದ್ದು, ಪ್ರಸ್ತುತ ಕೋವಿಡ್ ನಂತರ ಸಹಜ ಸ್ಥಿತಿಗೆ ಬಂದ ಹಿನ್ನಲೆಯಲ್ಲಿ, ಜನದಟ್ಟಣೆಗೆ ಅನುಗುಣವಾಗಿ ಕಾರ್ಯಾಚರಣೆ ಮಾಡಲು ಚಾಲನಾ ಸಿಬ್ಬಂದಿಯ ಕೊರತೆ ಉಂಟಾಗಿದೆ. ನಿಗಮದ ಆರ್ಥಿಕ ಪರಿಸ್ಥಿತಿ ಕಷ್ಠಕರವಾಗಿರುವುದರಿಂದ ಚಾಲನಾ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ.

advertisement

ಹೀಗಾಗಿ ಜನದಟ್ಟಣೆಗೆ ಅನುಗುಣವಾಗಿ ಬಸ್ಸುಗಳ ಕಾರ್ಯಾಚರಣೆ ನಡೆಸಲು ಹೆಚ್ಚಿ ಸಿಬ್ಬಂದಿ ಬೇಕಿದ್ದು, ಈ ಹಿನ್ನಲೆಯಲ್ಲಿ 63 ವರ್ಷ ವಯೋಮಿತಿ ಮೀರದ ಚಾಲಕರನ್ನು ಮೂರು ತಿಂಗಳ ಅವಧಿಗೆ ನಿಗಮದಲ್ಲಿ ತಾತ್ಕಾಲಿಕ ಆಧಾರದ ಮೇಲೆ ಚಾಲಕರನ್ನಾಗಿ ಉಪಯೋಗಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಲಾಗಿದೆ. ಕೆಲ ಷರತ್ತುಗಳೊಂದಿಗೆ ನಿವೃತ್ತ ಚಾಲಕರು, ಪುತ್ತೂರು, ರಾಮನಗರ, ಚಾಮರಾಜನಗರ, ಮಂಗಳೂರು ವಿಭಾಗಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೂಚಿಸಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಆಗಸ್ಟ್‌ 12 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ; ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ

advertisement