ನಾಳೆ ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ನಾಳೆಯಿಂದ (ಮೇ 18) ಇನ್ನಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೆಲವು ದಿನಗಳಿಂದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇದು ಮೇ 18ರಿಂದ ಇನ್ನಷ್ಟು ಜೋರಾಗಲಿದೆ ಎಂದು ಹೇಳಿದೆ. ಮೇ 18ರಂದು ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ಜೋರಾಗಿ ಸುರಿಯಲಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 18 ಹಾಗೂ 19ರಂದು ಈ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದ್ದು, ರೆಡ್‌ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆಯಲ್ಲಿ ಮುಂದಿನ 4 ದಿನ, ಬೀದರ್‌, ವಿಜಯಪುರ, ರಾಯಚೂರು, ಕಲಬುರಗಿ, ಯಾದಗಿರಿ, ಕೊಪ್ಪಳ, ಗದಗ, ಹಾವೇರಿ, ಬಾಗಲಕೋಟೆ ಮತ್ತು ಬೆಳಗಾವಿಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಪ್ರಮುಖ ಸುದ್ದಿ :-   ಹುಕ್ಕಾ, ಹುಕ್ಕಾ ಬಾರ್‌ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement