ಮೈಸೂರು: ರಾತ್ರಿ ಭಾರೀ ಮಳೆ, ಬೆಳ್ಳಂಬೆಳಿಗ್ಗೆ ಕೊಚ್ಚಿಹೋದ ಸೇತುವೆ

posted in: ರಾಜ್ಯ | 0

ಮೈಸೂರು: ಸೋಮವಾರ  ರಾತ್ರಿ ಸುರಿದ ಭಾರೀ ಮಳೆಗೆ ನಗರದ ಪ್ರಮುಖ ರಸ್ತೆಯೊಂದರ ಸೇತುವೆಯೇ ಕೊಚ್ಚಿಹೋಗಿದೆ.
ಮೈಸೂರಿನ ಹೊರವಲಯದಲ್ಲಿರುವ ಬೋಗಾದಿ ಕೆರೆ ತುಂಬಿ ಹರಿಯುತ್ತಿದ್ದು, ಇದರಿಂದ ರಿಂಗ್ ರಸ್ತೆಯಿಂದ ಅಮೃತಾನಂದಮಯಿ ವಿದ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ನಗರದ ಬೋಗಾದಿ ನಾಗಲಿಂಗೇಶ್ವರ ದೇವಸ್ಥಾನದ ಸಮೀಪದ (ಅಮೃತನಂದಮಯಿ ಶಾಲೆಯ ಹಿಂಭಾಗ) ಇರುವ ಸೇತುವೆ ಕೊಚ್ಚಿ ಹೋಗಿದೆ.ರಸ್ತೆಯ ಮಧ್ಯದ ಸೇತುವೆಯೇ ನೀರಿನಲ್ಲಿ ಕೊಚ್ಚಿಹೋಗಿದ್ದು, ರಸ್ತೆ ಕುಸಿತಗೊಂಡಿದೆ.

advertisement

ನಗರದಲ್ಲಿ ಬಿಟ್ಟೂ ಬಿಡದೆ ಸುರಿದ ಮಳೆಯಿಂದಾಗಿ ಬೋಗಾದಿ ಕೆರೆ ಉಕ್ಕಿ ಹರಿಯುತ್ತಿದ್ದು, ವಿವಿಧ ಬಡಾವಣೆಗಳಿಗೆ ನೀರು ನುಗ್ಗಿದೆ. ಇಲ್ಲಿನ ಆನಂದ ನಗರ ಅಕ್ಷರಶಃ ಜಲದಿಗ್ಬಂಧನಕ್ಕೆ ಒಳಗಾಗಿದೆ. ಬಹುತೇಕ ನಿವಾಸಿಗಳು ನಿನ್ನೆಯಿಂದ ಮನೆಯೊಳಗೇ ಇದ್ದಾರೆ. ಮಳೆ ನೀರು ಮನೆಯ ಗೇಟ್‌ವರೆಗೂ ತುಂಬಿದ್ದು, ಮಂಗಳವಾರ ಮಳೆ ಮುಂದುವರಿದರೆ ನೀರು ಮನೆಗಳಿಗೆ ನುಗ್ಗುವ ಸಾಧ್ಯತೆ ದಟ್ಟವಾಗಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ಓದಿರಿ :-   ಬೆಳಗಾವಿ ಐಟಿಬಿಪಿ ಶಿಬಿರದಲ್ಲಿ ಎಕೆ-47 ರೈಫಲ್​ಗಳ ಕಳ್ಳತನ

ನಿಮ್ಮ ಕಾಮೆಂಟ್ ಬರೆಯಿರಿ

advertisement