ಕೃಷ್ಣ ಜನ್ಮಭೂಮಿ ವಿವಾದ: ಶಾಹಿ ಈದ್ಗಾದ ವೀಡಿಯೋಗ್ರಫಿ ಕೋರಿದ ಅರ್ಜಿ ವಿಚಾರಣೆಗೆ ಮಥುರಾ ಕೋರ್ಟ್ ಸಮ್ಮತಿ

ಮಥುರಾ: ವಾರಾಣಸಿಯ ಜ್ಞಾನವಾಪಿ ಮಸೀದಿ ಸಮೀಕ್ಷೆ ಕುರಿತು ನಡೆಯುತ್ತಿರುವ ವಿವಾದದ ನಡುವೆ, ಉತ್ತರ ಪ್ರದೇಶದ ಮಥುರಾದ ಸ್ಥಳೀಯ ನ್ಯಾಯಾಲಯವು ಕೃಷ್ಣ ಜನ್ಮಭೂಮಿಯ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯ ವೀಡಿಯೋಗ್ರಾಫಿಗೆ ಮಾಡಿವಂತೆ ಕೋರಿದ್ದ ಅರ್ಜಿಯ ವಿಚಾರಣೆಗೆ ಸಮ್ಮತಿಸಿದೆ.
13.37 ಎಕರೆ ಪ್ರದೇಶದಲ್ಲಿ ಹರಡಿರುವ ಶ್ರೀ ಕೃಷ್ಣ ಜನ್ಮಭೂಮಿ ದೇವಸ್ಥಾನದ ಒಂದು ಭಾಗವನ್ನು ಕೆಡವಿ ಶಾಹಿ ಈದ್ಗಾ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಅರ್ಜಿಯಲ್ಲಿ ಹೇಳಿದ್ದಾರೆ. ಮಥುರಾದ ಶಾಹಿ ಈದ್ಗಾ ಮಸೀದಿ ಆವರಣದಲ್ಲಿ ವೀಡಿಯೋ ಸಮೀಕ್ಷೆ ನಡೆಸಲು ವಕೀಲ ಆಯುಕ್ತರನ್ನು ನೇಮಿಸುವಂತೆ ಅರ್ಜಿದಾರರು ಕೋರಿದ್ದಾರೆ. ಮಸೀದಿಯನ್ನು ತೆರವು ಮಾಡಿ ಮಂದಿರ ನಿರ್ಮಾಣಕ್ಕೆ ಭೂಮಿಯನ್ನು ವಾಪಸ್ ನೀಡುವಂತೆ ಒತ್ತಾಯಿಸಿದ್ದಾರೆ.

ಅಲಹಾಬಾದ್ ಹೈಕೋರ್ಟ್ ಆದೇಶ
ಶ್ರೀ ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ನಾಲ್ಕು ತಿಂಗಳೊಳಗೆ ವಿಲೇವಾರಿ ಮಾಡುವಂತೆ ಮಥುರಾ ನ್ಯಾಯಾಲಯಕ್ಕೆ ಅಲಹಾಬಾದ್ ಹೈಕೋರ್ಟ್‌ನ ಮೇ 12 ರ ಲಕ್ನೋ ಪೀಠದ ಆದೇಶದ ಹೊರತಾಗಿಯೂ ಈ ಬೆಳವಣಿಗೆ ನಡೆದಿದೆ. ಸುನ್ನಿ ವಕ್ಫ್ ಬೋರ್ಡ್ ಮತ್ತು ಇತರ ಕಕ್ಷಿದಾರರು ವಿಚಾರಣೆಯಲ್ಲಿ ಭಾಗಿಯಾಗದಿದ್ದರೆ ಅಥವಾ ಪ್ರಕರಣವನ್ನು ಸ್ಥಗಿತಗೊಳಿಸಲು ಪ್ರಯತ್ನಿಸಿದರೆ, ನ್ಯಾಯಾಲಯವು ಎಕ್ಸ್‌ ಪಾರ್ಟೆ ಆದೇಶಗಳನ್ನು ನೀಡಬಹುದು ಎಂದು ಹೈಕೋರ್ಟ್ ಹೇಳಿದೆ.
ಶ್ರೀ ಕೃಷ್ಣ ಜನ್ಮಭೂಮಿ ಮತ್ತು ಶಾಹಿ ಈದ್ಗಾ ವಿವಾದಕ್ಕೆ ಸಂಬಂಧಿಸಿದಂತೆ ಮಥುರಾ ನ್ಯಾಯಾಲಯದಲ್ಲಿ ಇದುವರೆಗೆ ಒಂಬತ್ತು ಪ್ರಕರಣಗಳು ದಾಖಲಾಗಿವೆ. ಈ ಸಂಬಂಧ ಜಿಲ್ಲಾ ನ್ಯಾಯಾಧೀಶರು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ್ದಾರೆ.

ಪ್ರಮುಖ ಸುದ್ದಿ :-   ಸುಪ್ರೀಂ ಕೋರ್ಟ್ ತರಾಟೆ ನಂತರ ದೊಡ್ಡದಾಗಿ ಕ್ಷಮೆಯಾಚನೆ ಪ್ರಕಟಿಸಿದ ಪತಂಜಲಿ ಸಂಸ್ಥೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement