ಹೊಸ ಪ್ರಕರಣದಲ್ಲಿ ಕಾರ್ತಿ ಚಿದಂಬರಂ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ

ನವದೆಹಲಿ: ವಿದೇಶಿ ಹಣ ರವಾನೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಅವರ ನಿವಾಸ ಸೇರಿದಂತೆ ಏಳು ಕಡೆ ಶೋಧ ನಡೆಸಲಾಗುತ್ತಿದೆ.

ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ಚೆನ್ನೈ ಮತ್ತು ಶಿವಗಂಗೈನಲ್ಲಿ ಸಿಬಿಐ ದಾಳಿ ಮಾಡಿದೆ.
ಕಾರ್ತಿ ಚಿದಂಬರಂ ಅವರು ಲಂಚದ ಬದಲಾಗಿ ಚೀನಾದ ಉದ್ಯೋಗಿಗಳಿಗೆ ವೀಸಾಗಳನ್ನು ಒದಗಿಸುವಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೊಸ ದಾಳಿಗಳಿಗೆ ಪ್ರತಿಕ್ರಿಯಿಸಿದ ಕಾರ್ತಿ ಚಿದಂಬರಂ, “ನಾನು ಎಣಿಕೆ ಕಳೆದುಕೊಂಡಿದ್ದೇನೆ, ಎಷ್ಟು ಬಾರಿ ದಾಳಿ ಆಗಿದೆ? ಇದು ದಾಖಲೆಯಾಗಿರಬೇಕು” ಎಂದು ಟ್ವೀಟ್ ಮಾಡಿದ್ದಾರೆ.

2010 ಮತ್ತು 2014ರ ನಡುವೆ ನಡೆದ ಆಪಾದಿತ ವಿದೇಶಿ ಹಣ ರವಾನೆ ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಪ್ರಕರಣದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ಸಿಬಿಐ ಪ್ರಾಥಮಿಕ ವಿಚಾರಣೆ ನಡೆಸಿದ್ದು, ಇದೀಗ ಎಫ್‌ಐಆರ್‌ ಆಗಿ ಬದಲಾಗಿದೆ.
ಕಾರ್ತಿ ತಂದೆ ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಮಯದಲ್ಲಿ 305 ಕೋಟಿ ರೂ. ಮೊತ್ತದ ವಿದೇಶಿ ಹಣವನ್ನು ಸ್ವೀಕರಿಸುವುದಕ್ಕಾಗಿ ಐಎನ್‌ಎಕ್ಸ್ ಮೀಡಿಯಾಗೆ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ (ಎಫ್‌ಐಪಿಬಿ) ಅನುಮತಿ ನೀಡಿದ ಪ್ರಕರಣವು ಸೇರಿದೆ. ಇದೇ ಪ್ರಕರಣದಲ್ಲಿ ಹಿಂದೊಮ್ಮೆ ಕಾರ್ತಿ ಅವರ ಬಂಧನವಾಗಿತ್ತು.

ಪ್ರಮುಖ ಸುದ್ದಿ :-   ನಿಮ್ಮವನಾಗಿದ್ದೆ...ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement