ನಾಳೆ ಮಧ್ಯಾಹ್ನ 12:30ಕ್ಕೆ ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ನಾಳೆ, ಮೇ 19ರಂದು ಪ್ರಕಟವಾಗಲಿದೆ.
ಮಾರ್ಚ್ 28 ರಿಂದ ಏ.11ರ ವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಸುಸೂತ್ರವಾಗಿ ನಡೆದಿದೆ. ಈಗಾಗಲೇ ಮೌಲ್ಯಮಾಪನ ಪೂರ್ಣಗೊಂಡಿದ್ದು, ಫಲಿತಾಂಶಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ನಾಳೆ, ಮೇ 19ರಂದು ಮಧ್ಯಾಹ್ನ 12:30ಕ್ಕೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಕಾತರದಿಂದ ಎದುರು ನೋಡುತ್ತಿದ್ದು, http://kseeb.kar.nic.in, http://sslc.karnataka.gov.in, http://karresults.nic.in ವೆಬ್‍ಸೈಟ್‍ಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯಾದ್ಯಂತ ಒಟ್ಟು 15,387 ಶಾಲೆಗಳ 8.73 ಲಕ್ಷ ವಿದ್ಯಾರ್ಥಿಗಳು 3446 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ಸುಮಾರು 243 ಕೇಂದ್ರಗಳಲ್ಲಿ ನಡೆದ ಮೌಲ್ಯಮಾಪನದಲ್ಲಿ 63,796 ಶಿಕ್ಷಕರು ಭಾಗಿಯಾಗಿದ್ದರು.

4 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement