ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ, ಜೂನ್‌​ 9ಕ್ಕೆ ಕಾಲೇಜು ಆರಂಭ- ಮಾರ್ಗಸೂಚಿ ಬಿಡುಗಡೆ

posted in: ರಾಜ್ಯ | 0

ಬೆಂಗಳೂರು: ಹಿಜಬ್ ವಿವಾದ ಹಿನ್ನಲೆಯಲ್ಲಿ ಪಿಯುಸಿ ಬೋರ್ಡ್ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್‌ ಎಲ್ಲ ಕಾಲೇಜುಗಳಿಗೆ ಸೂಚಿಸಿದೆ.2022-23ನೇ‌ ಸಾಲಿನ‌ ಶೈಕ್ಷಣಿಕ ವರ್ಷಕ್ಕೆ ಪಿಯು ಬೋರ್ಡ್‌ ಕಾಲೇಜು ಪ್ರವೇಶ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.
ಪದವಿಪೂರ್ವ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿನ ಪಿಯು ಕಾಲೇಜುಗಳಿಗೆ ಅನ್ವಯ ಆಗಲಿದ್ದು, ಕೆಲವು ಕಾಲೇಜುಗಳಲ್ಲಿ ಈಗಾಗಲೇ ಸಮವಸ್ತ್ರ ಕಡ್ಡಾಯವಾಗಿದೆ. ಕೆಲವು ಕಾಲೇಜುಗಳಲ್ಲಿ ಸಮವಸ್ತ್ರ ಇಲ್ಲದ್ದರಿಂದ ವಿದ್ಯಾರ್ಥಿಗಳು ಕಲರ್​ ಡ್ರೆಸ್​ ಹಾಕಿಕೊಂಡು ಬರುತ್ತಿದ್ದರು. ಆದರೆ ಇನ್ಮುಂದೆ ಎಲ್ಲರಿಗೂ ಸಮವಸ್ತ್ರ ಕಡ್ಡಾಯವಾಗಿದೆ.

advertisement

ಒಂದು ವೇಳೆ ಆಡಳಿತ ಮಂಡಳಿ/ಸಿಡಿಸಿ ಸಮವಸ್ತ್ರ ನಿಗದಿ ಪಡಿಸದಿದ್ದಲ್ಲಿ ಸಮಾನತೆ ಮತ್ತು ಏಕತೆ ಕಾಪಾಡಿಕೊಂಡು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ಬರದ ಉಡುಪು ಧರಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
2022-23ನೇ‌ ಸಾಲಿನ‌ ಶೈಕ್ಷಣಿಕ ವರ್ಷಕ್ಕೆ ಪಿಯು ಬೋರ್ಡ್‌ ಕಾಲೇಜು ಪ್ರವೇಶ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ವಿಶೇಷವಾಗಿ ಸಮವಸ್ತ್ರದ ಬಗ್ಗೆ ಸೂಚನೆ ನೀಡಲಾಗಿದೆ.
ಮೇ 20ರಿಂದ ಪ್ರಥಮ ಪಿಯುಸಿ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದ್ದು, ಜೂನ್‌ 1 ರಿಂದ ದ್ವಿತೀಯ ಪಿಯುಸಿ ಪ್ರಕ್ರಿಯೆ ಆರಂಭಿಸುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಯ ಮಕ್ಕಳಿಗೆ ಪಠ್ಯಕ್ರಮ ಬೋಧನಾ ಪ್ರಕ್ರಿಯೆ ಜೂನ್‌ 9 ರಿಂದ ಆರಂಭವಾಗಲಿದೆ.

ಓದಿರಿ :-   'ಅಸಾಧಾರಣ' ಗಾಯಕ, ಕನ್ನಡದ ಮನೆ ಮಾತಾಗಿದ್ದರು : ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

2022-23ನೇ ಸಾಲಿನ ಶೈಕ್ಷಣಿಕ ಮೊದಲನೇ ಅವಧಿ ಸೆಪ್ಟೆಂಬರ್‌ 30ರ ವರೆಗೆ ನಡೆಯಲಿದೆ. ಎರಡನೇ ಅವಧಿ ಅಕ್ಟೋಬರ್‌ 13 ರಿಂದ 2023ರ ಮಾರ್ಚ್‌ 31ರ ವರೆಗೆ ನಡೆಸಲು ನಿಗದಿಪಡಿಸಲಾಗಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿಗೆ ಜೂನ್‌ 30 ರವರೆಗೆ ಮಕ್ಕಳ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.
ಜೂನ್‌ 15 ರವರೆಗೆ ಪ್ರಥಮ ಪಿಯುಗೆ ದಂಡ ಶುಲ್ಕವಿಲ್ಲದೆ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜೂನ್‌ 1 ರಿಂದ 15ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ದಂಡ ಶುಲ್ಕದೊಂದಿಗೆ ಜೂನ್‌ 30 ರವರೆಗೆ ಅವಕಾಶ ನೀಡಲಾಗಿದೆ. ಅಕ್ಟೋಬರ್‌ 1 ರಿಂದ 12 ರವರೆಗೆ ಮಧ್ಯಂತರ ರಜೆ ಇರಲಿದೆ. ಏಪ್ರಿಲ್‌ 1 ರಿಂದ ಬೇಸಿಗೆ ರಜೆ ಆರಂಭವಾಗಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ

advertisement