ಬಿಜೆಪಿಗೆ ಸೇರ್ಪಡೆಯಾದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ

posted in: ರಾಜ್ಯ | 0

ಬೆಂಗಳೂರು: ವಿಧಾನ ಪರಿಷತ್‌ನ ಸಭಾಪತಿ ಸ್ಥಾನ ಹಾಗೂ ಪರಿಷತ್‌ ಸ್ಥಾನಕ್ಕೆ ಎರಡು ದಿನಗಳ ಹಿಂದೆ ರಾಜೀನಾಮೆ ನೀಡಿದ್ದ ಬಸವರಾಜ ಹೊರಟ್ಟಿ ಅವರು ಇಂದು, ಬುಧವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆರ್‌ಟಿ ನಗರದ ನಿವಾಸದಲ್ಲಿ ಸರಳ ಕಾರ್ಯಕ್ರಮದಲ್ಲಿ ಬಸವರಾಜ ಹೊರಟ್ಟಿ ಬಿಜೆಪಿಗೆ ಸೇರ್ಪಡೆಯಾದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಪಕ್ಷಕ್ಕೆ ಬರಮಾಡಿಕೊಂಡರು. ಸಚಿವರಾದ ಆರ್. ಅಶೋಕ್, ಸಿ.ಸಿ ಪಾಟೀಲ್,ಅರಗ ಜ್ಞಾನೇಂದ್ರ, ಗೋವಿಂದ ಕಾರಜೋಳ, ಮಾಜಿ ಸಚಿವ ಜಗದೀಶ ಶೆಟ್ಟರ, ಶಾಸಕರುಗಳಾದ ಕಳಸಪ್ಪ ಬಂಡಿ, ರೇಣುಕಾಚಾರ್ಯ, ಸಿದ್ದು ಸವದಿ ಮೊದಲಾದವರಿದ್ದರು.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಬಸವರಾಜ ಹೊರಟ್ಟಿ ಅವರ ಪಕ್ಷ ಸೇರ್ಪಡೆಯಿಂದ ಬಿಜೆಪಿಗೆ ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಶಕ್ತಿ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರು ಹೇಳಿದರು.
ದೇಶದಲ್ಲೇ ಹೊರಟ್ಟಿಯವರು ನಿರಂತರ ಗೆಲುವಿನ ದಾಖಲೆ ಹೊಂದಿರುವ ಶ್ರೇಯ ಹೊಂದಿದ್ದಾರೆ. ಬಸವರಾಜ ಹೊರಟ್ಟಿ ಅವರು ರಾಜಕಾರಣದಲ್ಲಿ ೪೫ ವರ್ಷಗಳ ಸುದೀರ್ಘ ಅನುಭವ ಹೊಂದಿದ್ದಾರೆ. ಅವರ ಅನುಭವವನ್ನು ಪಕ್ಷ ಬಳಸಿಕೊಂಡು ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಅದ್ಧೂರಿ ಸಮಾವೇಶವನ್ನು ಆಯೋಜಿಸಿ ಹೊರಟ್ಟಿ ಪಕ್ಷ ಸೇರ್ಪಡೆಗೆ ಸ್ವಾಗತ ಕೋರಲಾಗುವುದು ಎಂದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   13 ವರ್ಷದ ಮಂಗಳೂರಿನ ಬಾಲಕನ ‘ಕೋಮು ದಾಳಿ’ ಎಂಬ ಕಟ್ಟು ಕಥೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 3

advertisement

ನಿಮ್ಮ ಕಾಮೆಂಟ್ ಬರೆಯಿರಿ