ರಾಜ್ಯದಲ್ಲಿ ವ್ಯಾಪಕ ಮಳೆ:ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ-ಸಚಿವ ಅಶೋಕ

ಬೆಂಗಳೂರು: ಬೆಂಗಳೂರು: ರಾಜ್ಯದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೊಕ್ ಹೇಳಿದರು..
ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹವಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆಯಾಗುವ ಸಂಭವವಿದೆ. ಹೀಗಾಗಿ ಕೆಲವು ತುರ್ತುಕ್ರಮಗಳನ್ನು ತೆಗೆದುಕೊಳ್ಳಲು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮುಖ್ಯವಾಗಿ ರಾಜ್ಯದ ಕರಾವಳಿ ತೀರ ಪ್ರದೇಶ, ಮಲೆನಾಡು, ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ಕಡೆ ಇನ್ನೂ ನಾಲ್ಕೈದು ದಿನ ಭಾರಿ ಮಳೆಯಾಗಬಹುದೆಂದು ಹವಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೀಗಾಗಿ ಕೆಲವು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವುದು, ಅಧಿಕಾರಿಗಳ ನಿಯೋಜನೆ ಸೇರಿದಂತೆ ಹತ್ತು -ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. ಪರಿಸ್ಥಿತಿ ಎದುರಿಸಲು ಸರ್ಕಾರ ಎಲ್ಲ ತಯಾರಿ ಮಾಡಿಕೊಂಡಿದೆ ಎಂದರು.
ಬೆಂಗಳೂರಿನ ಮಳೆ ಬೀಳುತ್ತಿದ್ದು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಸಂಬಂಧಪಟ್ಟ ಸಚಿವರು, ಶಾಸಕರು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಪಾಲಿಕೆಯು ದಿನದ 24 ಗಂಟೆಯೂ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement