ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿ.ಎಸ್. ನಾಗಭೂಷಣ ನಿಧನ

posted in: ರಾಜ್ಯ | 0

ಶಿವಮೊಗ್ಗ: ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಸಾಹಿತಿ ಡಿ.ಎಸ್. ನಾಗಭೂಷಣ ಅವರು ಬುಧವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು.
ಕಳೆದ ಮೂರು ತಿಂಗಳಿನಿಂದ ಉಸಿರಾಟದ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬುಧವಾರ ತಡರಾತ್ರಿ ತಮ್ಮ ಮನೆಯಲ್ಲಿ ನಿಧನರಾಗಿದ್ದಾರೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ನಾಗಭೂಷಣ​ ಅವರು ಗಾಂಧಿ ಕಥನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದರು. 1952 ಫೆಬ್ರವರಿ 1 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಹೊಸಕೋಟೆ ತಾಲೂಕಿನ ತಿಮ್ಮಸಂದ್ರದಲ್ಲಿ ಜನಿಸಿದ್ದ ಅವರು ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ 1975 ರಿಂದ 1981ರ ವರೆ ಸೇವೆ ಸಲ್ಲಿಸಿದ್ದ ಅವರು ನಂತರ ಸಹಾಯಕ ನಿಲಯ ನಿರ್ದೇಶಕರಾಗಿ 7 ವರ್ಷ ಕಾರ್ಯನಿರ್ವಹಿಸಿದರು.2005 ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದ ಅವರು ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡಿದ್ದರು.

ಅವರು ‘ಇಂದಿಗೆ ಬೇಕಾದ ಗಾಂಧಿ’, ‘ಲೋಹಿಯಾ ಜೊತೆಯಲ್ಲಿ’, ‘ರೂಪ ರೂಪಗಳನು ಧಾಟಿ’, ‘ಕುವೆಂಪು ಒಂದು ಪುನರನ್ವೇಷಣೆ’, ‘ಕುವೆಂಪು ಸಾಹಿತ್ಯ ದರ್ಶನ’, ‘ಜಯ ಪ್ರಕಾಶ ನಾರಾಯಣ ಒಂದು ಅಪೂರ್ಣ ಕ್ರಾಂತಿಯ ಕಥೆ’, ‘ನಮ್ಮ ಶಾಮಣ್ಣ’, ‘ಕನ್ನಡದ ಮನಸು ಮತ್ತು ಇತರ ಲೇಖನಗಳು’. ಹಾಗೂ ‘ಕಾಲಕ್ರಮ’, ‘ಗಮನ’, ‘ಅನೇಕ’, ‘ಈ ಭೂಮಿಯಿಂದ ಆ ಆಕಾಶದವರೆಗೆ’, ‘ಮರಳಿ ಬರಲಿದೆ ಸಮಾಜವಾದ’, ‘ವಸಿಷ್ಠರು ಮತ್ತು ವಾಲ್ಮೀಕಿಯರು’, ‘ಹಣತೆ'(ಜಿಎಸ್ಸೆಸ್ ಅಭಿನಂದನೆ ಗ್ರಂಥ), ‘ಗಾಂಧಿ ಕಥನ’ ಸೇರಿದಂತೆ ಹಲವು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ಅವರ ಸಂಪಾದಕತ್ವದಲ್ಲಿ ಮಾಸ ಪತ್ರಿಕೆ ಹೊಸ ಮನುಷ್ಯ ಪ್ರಕಟವಾಗುತ್ತಿತ್ತು. ಲೋಹಿಯಾ ಜನ್ಮಶತಾಬ್ದಿ ಪ್ರತಿಷ್ಠಾನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ನಿವೃತ್ತಿಯ ಬಳಿಕ ಅವರು ತಮ್ಮ ಪತ್ನಿ ಸವಿತಾ ನಾಗಭೂಷಣ ಅವರೊಂದಿಗೆ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದರು

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ: ಒಂದು ವಾರದಲ್ಲಿ ನಾಲ್ಕನೇ ಬಾರಿ ಭೂಕಂಪನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ