ರಾಜ್ಯದಲ್ಲಿ ಧಾರಾಕಾರ ಮಳೆ: ಕೆಲವೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುರುವಾರ ರಜೆ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ಶಿವಮೊಗ್ಗ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಅಲ್ಲಿನ ಜಿಲ್ಲಾಡಳಿತ ರಜೆ ಘೋಷಿಸಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಎಲ್ಲ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ವರುಣನ ಅಬ್ಬರ ಜೋರಾಗಿದ್ದು, ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ಮೈಸೂರು ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಒಂದು ದಿನದ ಷರತ್ತುಬದ್ಧ ರಜೆ ಘೋಷಿಸಿ ಮೈಸೂರಿನ ಡಿಡಿಪಿಐ ರಾಮಚಂದ್ರರಾಜೇ ಅರಸ್ ಆದೇಶಿಸಿದ್ದಾರೆ. ಮುಂದಿನ ರಜಾದಿನಗಳಲ್ಲಿ ಒಂದು ದಿನ ಕಾರ್ಯ ನಿರ್ವಹಿಸಲು ಶಾಲೆಗಳಿಗೆ ಸೂಚಿಸಲಾಗಿದೆ.
ಮಳೆ ಹಿನ್ನೆಲೆ ಮಂಡ್ಯ ಜಿಲ್ಲಾದ್ಯಂತ ಅಂಗನವಾಡಿ ಹಾಗೂ 1ರಿಂದ 10 ನೇ ತರಗತಿ ಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ. ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲೆಗಳಿಗೂ ಈ ಆದೇಶ ಅನ್ವಯವಾಗಲಿದೆ.

ಪ್ರಮುಖ ಸುದ್ದಿ :-   ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement