ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಹೆಚ್ಚಳ: ಗೃಹ ಬಳಕೆ -ವಾಣಿಜ್ಯ ಸಿಲಿಂಡರ್‌ ಎರಡರ ಬೆಲೆಯೂ ಹೆಚ್ಚಳ

ನವದೆಹಲಿ: ದಿನಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಏರಿಕೆಯಾಗಿದೆ. ಇಂದು ಗುರುವಾರದಿಂದಲೇ ಜಾರಿಗೆ ಬರುವಂತೆ 14.2 ಕೆಜಿ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 3.5 ರೂ.ಗಳಷ್ಟು ಏರಿಕೆಯಾಗಿದೆ.
ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಸಾವಿರ ರೂ.ಗಳ ಗಡಿ ದಾಟಿದೆ.ಇಂದಿನಿಂದ ಗೃಹಬಳಕೆಯ ಸಿಲಿಂಡರ್ ಬೆಲೆ 1003 ರೂಪಾಯಿ ಆಗಿದೆ. ಈ ಮೊದಲು 999.50 ರೂಪಾಯಿ ಆಗಿತ್ತು.

ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಬೆಲೆಯಲ್ಲಿಯೂ ಏರಿಕೆಯಾಗಿದ್ದು, 8 ರೂ.ಗಳನ್ನು ಹೆಚ್ಚಿಸಲಾಗಿದೆ. ಒಂದು ತಿಂಗಳ ಅವಧಿಯಲ್ಲಿ ಗೃಹಬಳಕೆಯ ಸಿಲಿಂಡರ್‌ಗಳ ಬೆಲೆ ಏರಿಕೆಯಾಗುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಮೇ 8 ರಂದು ಗೃಹಬಳಕೆಯ ಅಡುಗೆ ಅನಿಲದ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50 ರೂ.ಗಳಷ್ಟು ಹೆಚ್ಚಿಸಲಾಗಿತ್ತು. ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಮೇ 7 ರಂದು ಪ್ರತಿ ಸಿಲಿಂಡರ್‌ಗೆ 10 ರೂ.ಗಳಷ್ಟು ಹೆಚ್ಚಿಸಲಾಗಿತ್ತು.

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement