ಬಿಜೆಪಿ ಸೇರಿದ ಮಾಜಿ ಕಾಂಗ್ರೆಸ್ ನಾಯಕ ಸುನಿಲ್ ಜಾಖರ್

ನವದೆಹಲಿ: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದ ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಸುನಿಲ್ ಜಾಖರ್ ಅವರು, ಈಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ‌ ಜಾಖರ್ ಅವರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಕೇಸರಿ ಶಾಲು ಧರಿಸಿದರು. ಕಾಂಗ್ರೆಸ್ ನಾಯಕತ್ವ ಮತ್ತು ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರ ವಿರುದ್ಧ ಟೀಕೆಗಳನ್ನು ಮಾಡಿದ್ದಕ್ಕಾಗಿ ಪಕ್ಷವು ಅವರಿಗೆ ಶೋಕಾಸ್ ನೋಟಿಸ್ ನೀಡಿತ್ತು. ಇದಾದ ಕೆಲವೇ ದಿನಗಳಲ್ಲಿ ಅವರು ಪಕ್ಷಕ್ಕೆ ಗುಡ್‌ಬೈ ಹೇಳಿದ್ದರು.

ಜಾಖರ್‌ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಅಲ್ಲದೆ, ಪಂಜಾಬ್‌ನಲ್ಲಿ ಅವರಿಗೆ ಹೊಣೆಗಾರಿಕೆ ನೀಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗುತ್ತಿದೆ. ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮತ್ತಷ್ಟು ಕಾಂಗ್ರೆಸ್ ನಾಯಕರನ್ನು ಬಿಜೆಪಿ ತೆಕ್ಕೆಗೆ ಕರೆತರುವಲ್ಲಿ ಸುನಿಲ ಜಾಖರ್‌ ಅವರು ಪ್ರಮುಖ ಪಾತ್ರ ವಹಿಸುವ ನಿರೀಕ್ಷೆ ಇದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement