ಆರಾಧನಾ ಸ್ಥಳಗಳ ಕಾಯಿದೆಯಲ್ಲಿ ಪೂಜಾ ಸ್ಥಳದ ಧಾರ್ಮಿಕ ಸ್ವರೂಪ ಖಚಿತ ಪಡಿಸಿಕೊಳ್ಳುವುದು ನಿರ್ಬಂಧಿಸಿಲ್ಲ: ಸುಪ್ರೀಂಕೋರ್ಟ್

ನವದೆಹಲಿ:ಆರಾಧನಾ ಸ್ಥಳಗಳ ಕಾಯಿದೆಯಲ್ಲಿ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವನ್ನು ಖಚಿತ ಪಡಿಸಿಕೊಳ್ಳುವುದನ್ನು ನಿರ್ಬಂಧಿಸಿಲ್ಲ ಎಂದು ಶುಕ್ರವಾರ ಸುಪ್ರೀಂ ಕೋರ್ಟ್‌ ಮೌಖಿಕವಾಗಿ ಹೇಳಿದ್ದು, ದೇಶದಲ್ಲಿನ ಧಾರ್ಮಿಕ ರಚನೆಗಳ ಸ್ವರೂಪ ಮತ್ತು ಗುಣಲಕ್ಷಣಗಳಿಗೆ ಸಂಬಂಧಿಸಿದಂತೆ ಮಹತ್ವದ ಅಭಿಪ್ರಾಯ ಎಂದು ಪರಿಗಣಿಸಲ್ಪಟ್ಟಿದೆ. ಕಾಶಿ ವಿಶ್ವನಾಥ ದೇಗುಲ-ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಅವರು “1991ರ … Continued

ವೀಸಾ ಹಗರಣ: ಬಂಧಿಸುವ ಮೂರು ದಿನಗಳ ಮುಂಚಿತವಾಗಿ ಕಾರ್ತಿ ಚಿದಂಬರಂಗೆ ನೋಟಿಸ್ ನೀಡಲು ಸಿಬಿಐಗೆ ಕೋರ್ಟ್ ನಿರ್ದೇಶನ

ನವದೆಹಲಿ: ತಲ್ವಾಂಡಿಯಲ್ಲಿ ಪಂಜಾಬ್‌ನಲ್ಲಿ ಸಬೋ ಪವರ್ ಲಿಮಿಟೆಡ್ ಕೆಲಸ ಮಾಡುತ್ತಿರುವ 263 ಚೀನಿ ಪ್ರಜೆಗಳ ವೀಸಾವನ್ನು ತೆರವುಗೊಳಿಸಲು 50 ಲಕ್ಷ ರೂಪಾಯಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರನ್ನು ಬಂಧಿಸಬೇಕಾದರೆ ಮೂರು ದಿನಗಳ ಮುಂಚಿತವಾಗಿ ನೋಟಿಸ್ ನೀಡುವಂತೆ ದೆಹಲಿ ನ್ಯಾಯಾಲಯ ಶುಕ್ರವಾರ ಸಿಬಿಐಗೆ ನಿರ್ದೇಶನ ನೀಡಿದೆ. . ವಿಶೇಷ ನ್ಯಾಯಾಧೀಶ … Continued

ಮದುವೆಗೆ ಹುಡುಗಿ ನೋಡಿಕೊಂಡು ಬರುತ್ತಿದ್ದ ಯುವಕ ಮಳೆನೀರಿಗೆ ಕೊಚ್ಚಿಹೋದ

ಗದಗ: ಮದುವೆಯಾಗಲು ಹುಡುಗಿ ನೋಡಿಕೊಂಡು ವಾಪಸ್​ ಬರುತ್ತಿದ್ದಾಗ ಯುವಕನೊಬ್ಬ ಮಾರ್ಗಮಧ್ಯೆ ಹಳ್ಳದ ನೀರಲ್ಲಿ ಕೊಚ್ಚಿಕೊಂಡು ಹೋಗಿ ಸಾವಿಗೀಡಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಯಕಲಾಸಪುರ ಗ್ರಾಮದಲ್ಲಿ ನಡೆದಿದೆ. ಟಿಪ್ಪು ಸುಲ್ತಾನ್ (26) ಮೃತ ದುರ್ದೈವಿ. ಗುರುವಾರ ಕನ್ಯೆ ನೋಡಲು ಉಪ್ಪಿನ ಬೆಟಗೇರಿಗೆ ಹೋಗಿದ್ದ ಯುವಕ ಸಂಜೆ ವಾಪಸ್​ ಊರಿಗೆ ಹಿಂತಿರುಗುತ್ತಿದ್ದ ಎಂದು ಹೇಳಲಾಗಿದೆ. ಈ … Continued

ಕನ್ನಡ ಸಾರಸ್ವತ ಲೋಕದ ಶಿಖರಪ್ರಾಯ ಕಾದಂಬರಿಕಾರ ತರಾಸು…21ರಂದು ಜನ್ಮ ಶತಮಾನೋತ್ಸವ ಕಾರ್ಯಕ್ರಮ

(ತರಾಸು ಅಭಿಮಾನಿಗಳ ಬಳಗ, ಹುಬ್ಬಳ್ಳಿ-ಧಾರವಾಡ, ಕೆಎಲ್‌ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಶಿಕ್ಷಣ ವಿಭಾಗ ಹುಬ್ಬಳ್ಳಿ ಸಹಯೋಗದಲ್ಲಿ ತ.ರಾ.ಸು ಜನ್ಮ ಶತಮಾನೋತ್ಸವ ಮತ್ತು ಪ್ರಬಂಧ ಸ್ಪರ್ಧೇ ಹಾಗೂ ಸನ್ಮಾನ ಸಮಾರಂಭವು ೨೧ ರಂದು (ಶನಿವಾರ ೨೧-೦೫-೨೦೨೨ ರಂದು) ಮಧ್ಯಾಹ್ನ ೧೨.೦೦ ಗಂಟೆಗೆ ಕೆಎಲ್‌ಇ ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದ್ದು, ಈ ನಿಮಿತ್ತ ಲೇಖನ.) … Continued

ಸಿದ್ದಾಪುರ: ಕ್ಷುಲ್ಲಕ ಕಾರಣಕ್ಕೆ ಹೆಂಡತಿಗೆ ಕತ್ತಿಯಿಂದ ಹೊಡೆದುಕೊಂದ ಗಂಡ

ಸಿದ್ದಾಪುರ: ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಹೆಂಡತಿ ಮೇಲೆ ಗಂಡ ಕತ್ತಿಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಹೆಂಡತಿ ಸಾವಿಗೀಡಾದ ಘಟನೆ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೆಗ್ಗೋಡ್‌ಮನೆಯಲ್ಲಿ ಶುಕ್ರವಾರ (ಮೇ 20) ನಡೆದ ಬಗ್ಗೆ ವರದಿಯಾಗಿದೆ. ಮೃತ ಮಹಿಳೆಯನ್ನು ನಾಗರತ್ನ ಮಂಜುನಾಥ ಚನ್ನಯ್ಯ (38) ಎಂದು ಗುರುತಿಸಲಾಗಿದೆ. ಮಂಜುನಾಥ ಕೇರಿಯ ಚೆನ್ನಯ್ಯ ಎನ್ನುವವರ … Continued

ಬಳ್ಳಾರಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ರಫ್ತಿಗೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಕರ್ನಾಟಕದ ಬಳ್ಳಾರಿ, ತುಮಕೂರು ಚಿತ್ರದುರ್ಗ ಜಿಲ್ಲೆಗಳ ಗಣಿಗಳಿಂದ ತೆಗೆದ ಕಬ್ಬಿಣದ ಅದಿರನ್ನು ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರದ ನಿಲುವನ್ನು ಗಮನಿಸಿ ಕಬ್ಬಿಣದ … Continued

ಗುಜರಾತ್, ಹಿಮಾಚಲದಲ್ಲಿ ಕಾಂಗ್ರೆಸ್ ಸೋಲು ಕಾಣುತ್ತದೆ: ಪ್ರಶಾಂತ್ ಕಿಶೋರ್ ಭವಿಷ್ಯ

ನವದೆಹಲಿ: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಜೆಪಿ ಆಡಳಿತವಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ “ಸನ್ನಿಹಿತ ಚುನಾವಣಾ ಸೋಲನ್ನು” ಎದುರಿಸುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ಪ್ರತಿಪಾದಿಸಿದ್ದಾರೆ. ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನ ಶಿಬಿರದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಪದೇ ಪದೇ ನನ್ನನ್ನು ಕೇಳಲಾಗುತ್ತಿದೆ. ನನ್ನ ದೃಷ್ಟಿಯಲ್ಲಿ, ಯಥಾಸ್ಥಿತಿಯನ್ನು … Continued

34 ವರ್ಷಗಳ ಹಿಂದಿನ ರಸ್ತೆ ಜಗಳಕ್ಕೆ 1 ವರ್ಷ ಶಿಕ್ಷೆ: ಕೋರ್ಟ್‌ಗೆ ಶರಣಾದ ನವಜೋತ್‌ ಸಿಧು

ಪಟಿಯಾಲಾ (ಪಂಜಾಬ್): ಪಂಜಾಬ್ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಪಂಜಾಬ್‌ನ ಪಟಿಯಾಲಾ ಸೆಷನ್ಸ್‌ ಕೋರ್ಟ್‌ಗೆ ಇಂದು, ಶುಕ್ರವಾರ ಶರಣಾಗಿದ್ದಾರೆ. 1988 ರ ರಸ್ತೆ ರಂಪಾಟ ಪ್ರಕರಣದಲ್ಲಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣರಾದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಗುರುವಾರ ಸಿಧುಗೆ 1 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಶುಕ್ರವಾರ ಬೆಳಗ್ಗೆ … Continued

ಹೈದರಾಬಾದ್ ಪಶುವೈದ್ಯೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳ ಎನ್‌ಕೌಂಟರ್ ಉದ್ದೇಶಪೂರ್ವಕವಾಗಿ ಗುಂಡು ಹಾರಿಸಿದ್ದು: ತನಿಖಾ ಆಯೋಗ

ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ, ತೆಲಂಗಾಣದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಅಮಾನುಷ ಹತ್ಯೆ ಘಟನೆ ಹಾಗೂ ನಂತರ ಆರೋಪಿಗಳ ಎನ್‌ಕೌಂಟರ್‌ಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಎನ್‌ಕೌಂಟ್ ಘಟನೆಯ ತನಿಖೆ ನಡೆಸಲು ಸುಪ್ರೀಂಕೋರ್ಟ್ ನೇಮಿಸಿದ ಆಯೋಗವು ತನ್ನ ವರದಿ ಸಲ್ಲಿದ್ದು, ಈ ಎನ್‌ಕೌಂಟರ್ ಪೊಲೀಸರು ಸೃಷ್ಟಿಸಿದ ಕತೆ ಎಂದು ತಿಳಿಸಿದೆ. ಹೈದರಾಬಾದ್ ಸಾಮೂಹಿಕ ಅತ್ಯಾಚಾರ … Continued

ಬಾವನ ಮೇಲೆ ಸೇಡು ತೀರಿಸಿಕೊಳ್ಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆರೋಪಿ ಬಂಧನ

ಬೆಂಗಳೂರು: ತನ್ನ ಅಕ್ಕನಿಗೆ ವಿಚ್ಛೇದನ ನೀಡಿದ  ಬಾವನನ್ನು ಸಿಲುಕಿಸುವ ಉದ್ದೇಶದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಕಂಟ್ರೋಲ್ ರೂಮ್‍ಗೆ ಫೋನ್ ಕರೆ ಮಾಡಿ ಪೊಲೀಸರ ನಿದ್ದೆಗೆಡಿಸಿದ್ದ ಕೋಲ್ಕತ್ತಾದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವಿಲ್ಸನ್ ಗಾರ್ಡನ್‍ನ ಪಿಜಿಯಲ್ಲಿ ವಾಸವಾಗಿದ್ದ ಸುಭಾಷಿ … Continued