ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ: ಶಿಕ್ಷಣ ಸಚಿವ ನಾಗೇಶ

ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಲಿದೆ. ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ತಿಳಿಸಿದ್ದಾರೆ.
ಜೂನ್‌ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದ್ದು, ಜೂನ್ 16ರೊಳಗೆ ಮೌಲ್ಯಮಾಪನ ಮುಗಿಯಲಿದೆ. ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಟ್ವೀಟ್‌ ಮಾಟಿದ್ದಾರೆ.

ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಏಪ್ರಿಲ್ 22 ರಿಂದ ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಆರಂಭವಾಗಿತ್ತು. ಏಪ್ರಿಲ್ 22ರಿಂದ ಶುರುವಾದ ಪರೀಕ್ಷೆ ಮೇ 18ರಂದು ಮುಕ್ತಾಯವಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾವಣೆ ಮಾಡಿಕೊಂಡಿದ್ದರು. ಇವರಲ್ಲಿ ರೆಗ್ಯುಲರ್ ವಿದ್ಯಾರ್ಥಿಗಳು 6,00,519, ಪುನರಾವರ್ತಿತ ವಿದ್ಯಾರ್ಥಿಗಳು 61,808, ಖಾಸಗಿ ಅಭ್ಯರ್ಥಿಗಳು 21,928 ಎಂದು ಇಲಾಖೆ ಮಾಹಿತಿ ನೀಡಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement