ಪೆಗಾಸಸ್ ತನಿಖಾ ವರದಿ ಸಲ್ಲಿಸಲು 4 ವಾರಗಳ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಪೆಗಾಸಸ್ ಹಗರಣದ ತನಿಖಾ ವರದಿ ಸಲ್ಲಿಸಲು ತಾಂತ್ರಿಕ ಮತ್ತು ಮೇಲ್ವಿಚಾರಣಾ ಸಮಿತಿಗೆ ಸುಪ್ರೀಂಕೋರ್ಟ್ ನಾಲ್ವು ವಾರಗಳ ಕಾಲಾವಕಾಶವನ್ನು ವಿಸ್ತರಣೆ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ವಿಭಾಗೀಯ ಪೀಠ, ತನಿಖೆಯ ವರದಿಯನ್ನು ನಾಲ್ಕು ವಾರಗಳ ಒಳಗಾಗಿ ತನಿಖೆಯ ಮೇಲ್ವಿಚಾರಣಾ ನ್ಯಾಯಮೂರ್ತಿ ಅವರಿಗೆ ನೀಡಬೇಕು ಎಂದು ಸೂಚಿಸಿದೆ.

ಕಳೆದ ವರ್ಷ ಪೆಗಾಸಸ್ ಹಗರಣ ಕುರಿತು ಭಾರೀ ಚರ್ಚೆಗಳು ನಡೆದವು. ಸಂಸತ್ ಕಲಾಪದಲ್ಲಿ ಇದೇ ಹಗರಣಕ್ಕಾಗಿ ಕೋಲಾಹಲವಾಗಿತ್ತು. ಕೆಲವು ಪತ್ರಕರ್ತರು ಹಾಗೂ ಸಂಘ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‍ನ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ಅವರನ್ನೊಳಗೊಂಡ ಪೀಠ, ತನಿಖೆಗೆ ಆದೇಶಿಸಿತ್ತು. ಪ್ರಕರಣದ ತನಿಖೆಯ ಜವಾಬ್ದಾರಿ ವಹಿಸಿಕೊಳ್ಳಲು ಯಾರು ಮುಂದೆ ಬರದ ಹಿನ್ನೆಲೆಯಲ್ಲಿ ಒಂದಿಷ್ಟು ಕಾಲ ವಿಳಂಬವಾಗಿತ್ತು. 2021ರ ಆಕ್ಟೋಬರ್‌ನಲ್ಲಿ ತನಿಖೆಗೆ ಆದೇಶಿಸಿ, ನ್ಯಾಯಾಂಗ ತನಿಖೆಗೆ ಸಹಕಾರ ನೀಡಲು ತಾಂತ್ರಿಕ ಹಾಗೂ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದೆ.
ಸಮಿತಿ 29 ಮೊಬೈಲ್‍ಗಳನ್ನು ತಾಂತ್ರಿಕವಾಗಿ ಪರಿಶೀಲನೆ ನಡೆಸಿರುವುದನ್ನು ಇಂದಿನ ವಿಚಾರಣೆಯಲ್ಲಿ ಕೋರ್ಟ್‌ಗೆ ಸಮಿತಿ ತಿಳಿಸಿದೆ. ಈ ಮೊಬೈಲ್‍ಗಳನ್ನು ಜಪ್ತಿ ಮಾಡಲಾಗಿದೆ, ಅವಗಳನ್ನು ತಾಂತ್ರಿಕವಾಗಿ ಪರಿಶೀಲನೆ ನಡೆಸಲು ಇನ್ನಷ್ಟು ಕಾಲಾವಕಾಶ ಅಗತ್ಯ ಇದೆ ಎಂದು ನ್ಯಾಯಾಲಯಕ್ಕೆ ಸಮಿತಿ ಮನವಿ ಮಾಡಿತ್ತು.

ಪ್ರಮುಖ ಸುದ್ದಿ :-   ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ಮೊಬೈಲ್ ಬಳಕೆದಾರರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎಲ್ಲರ ಹೇಳಿಕೆಗಳನ್ನು ದಾಖಲಿಸಲಾಗುವುದು ಎಂದು ಸಮಿತಿ ಹೇಳಿದೆ. ಇದಕ್ಕೆ ಒಪ್ಪಿದ ಹಿಮಾ ಕೋಲಿ ಅವರನ್ನೊಳಗೊಂಡ ಮುಖ್ಯನ್ಯಾಯಮೂರ್ತಿಗಳ ಪೀಠ ನಾಲ್ಕು ವಾರಗಳಲ್ಲಿ ತಾಂತ್ರಿಕ ಪರಿಶೀನಾ ಅಂಶಗಳನ್ನು ತನಿಖಾ ಮುಖ್ಯಸ್ಥರಾದ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರಿಗೆ ತಿಳಿಸಬೇಕು.ಬಳಿಕ ನ್ಯಾಯಮೂರ್ತಿಗಳು ತಮ್ಮ ಅಭಿಪ್ರಾಯ ಆಧರಿಸಿ ಸುಪ್ರೀಂಕೋರ್ಟ್‍ಗೆ ವರದಿ ನೀಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿತು.
ಮುಂದಿನ ವಿಚಾರಣೆಯನ್ನು ಜುಲೈನಲ್ಲಿ ನಡೆಸುವುದಾಗಿ ಪೀಠ ಹೇಳಿದೆ. ಪೆಗಾಸಸ್ ಸ್ಪೈವೇರ್ ಬಳಸಿ 300 ಕ್ಕೂ ಹೆಚ್ಚು ಜನರ ಮೇಲೆ ಕಣ್ಗಾವಲು ಇರಿಸಲಾಗಿತ್ತು ಎಂದು ಅಂತರರಾಷ್ಟ್ರೀಯ ಮಾಧ್ಯಮ ಒಕ್ಕೂಟವು ವರದಿ ಮಾಡಿತ್ತು.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement