ಮೈಸೂರು ಮಾಜಿ ಜಿಲ್ಲಾಧಿಕಾರಿ ಸಿಂಧೂರಿಗೆ ಮತ್ತೆ ಸಂಕಷ್ಟ

ಬೆಂಗಳೂರು:ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ವಿವಾದಕ್ಕೆ ಗುರಿಯಾಗಿದ್ದ ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ವಿರುದ್ಧದ ಆರೋಪ ಕುರಿತು ತನಿಖೆ ನಡೆಸಲು ಸರ್ಕಾರ ಆದೇಶಿಸಿದೆ.
ನಾಲ್ಕು ಆರೋಪಗಳ ಸತ್ಯಾಸತ್ಯತೆ ತಿಳಿಯಲು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ತನಿಖಾಧಿಕಾರಿಯಾಗಿ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಮ್ ಅವರನ್ನು ನೇಮಿಸಿದ್ದು, ಅವರಿಗೆ 30 ದಿನಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.
ಮುಜರಾಯಿ ಇಲಾಖೆಯ ಆಯುಕ್ತರಾಗಿರುವ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ವೇಳೆ ಮಾರುಕಟ್ಟೆ ದರಕ್ಕಿಂತಲೂ ಹೆಚ್ಚಿನ ಹಣ ಕೊಟ್ಟು ಪರಿಸರ ಸ್ನೇಹಿ ಬ್ಯಾಗ್ ಖರೀದಿ ಮಾಡಿದ್ದಾರೆ ಎಂಬ ಆರೋಪವಿದೆ

. ಅದೇ ರೀತಿ ಜಿಲ್ಲಾಧಿಕಾರಿಗಳ ನಿವಾಸದಲ್ಲಿ 50 ಲಕ್ಷ ರೂ. ವೆಚ್ಚ ಮಾಡಿ ಅನಧಿಕೃತ ಈಜುಕೊಳ ಮತ್ತು ಜಿಮ್ ನಿರ್ಮಿಸಿದ್ದಾರೆ ಎಂಬ ಆರೋಪವೂ ಇದೆ.ಚಾಮರಾಜನಗರ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ಸಂಭವಿಸಿದ ಸಾವುಗಳಿಗೆ ಸಿಂಧೂರಿ ಆಗ ತೆಗೆದುಕೊಂಡ ನಿರ್ಧಾರ ಕಾರಣ ಎಂದು ಆ ಅವರ ಮೇಲೆ ಆರೋಪಿಸಲಾಗಿತ್ತು.
ಆದರೆ ಆಗ ಈ ಬಗ್ಗೆ ಆದೇಶ ಮಾಡದ ಸರ್ಕಾರ ಒಂದೂವರೆ ವರ್ಷದ ಬಳಿಕ ತನಿಖೆಗೆ ಆದೇಶಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ.
ಕೆ.ಆರ್. ನಗರ ಶಾಸಕ ಸಾ.ರಾ. ಮಹೇಶ್ ಅವರು ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಅಗಿದ್ದಾಗ ಆರೋಪ ಮಾಡಿದ್ದರು. ಹಲವು ಬಾರಿ ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದರು. ಮೈಸೂರು ಮಹಾನಗರ ಪಾಲಿಕೆ ಮಾಜಿ ಡೆಪ್ಯುಟಿ ಮೇಯರ್ ಶೈಲೇಂದ್ರ ಭೀಮರಾವ್ ಕೂಡ ಸರ್ಕಾರಕ್ಕೆ ಪತ್ರ ಬರೆದಿದ್ದರು. ರೋಹಿಣಿ ಸಿಂಧೂರಿ ಮತ್ತು ಆಗ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾ ನಾಗ್ ನಡುವೆ ಬಹಿರಂಗ ವಾಗ್ವಾದ ನಡದಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಮೈಸೂರಿನಿಂದ ವರ್ಗಾವಣೆ ಮಾಡಲಾಗಿತ್ತು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement