ಆರೋಗ್ಯದ ಕಾರಣ ನೀಡಿ ರೋಡ್ ರೇಜ್ ಪ್ರಕರಣದಲ್ಲಿ ಶರಣಾಗಲು ಹೆಚ್ಚಿನ ಸಮಯ ಕೋರಿದ ನವಜೋತ್‌ ಸಿಧು

ನವದೆಹಲಿ: ಪಂಜಾಬ್‌ನ ಮಾಜಿ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ನವಜೋತ್ ಸಿಂಗ್ ಸಿಧು ಅವರು 1988 ರ ರೋಡ್ ರೇಜ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಒಂದು ವರ್ಷ ಜೈಲು ಶಿಕ್ಷೆಗೆ ಗುರಿಯಾದ ನಂತರ ವೈದ್ಯಕೀಯ ಕಾರಣಗಳಿಗಾಗಿ ಶರಣಾಗಲು ಹೆಚ್ಚಿನ ಸಮಯ ಕೋರಿದ್ದಾರೆ. ಆದರೆ ನವಜೋತ್ ಸಿಂಗ್ ಸಿಧು ಅವರ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನವಜೋತ್ ಸಿಂಗ್ ಸಿಧು ಅವರು ಇಂದು ಪಟಿಯಾಲ ನ್ಯಾಯಾಲಯದ ಮುಂದೆ ಶರಣಾಗಬೇಕಿತ್ತು, ಆದರೆ ಅವರು ತಮ್ಮ ಆರೋಗ್ಯವನ್ನು ಉಲ್ಲೇಖಿಸಿ 1988 ರ ರೋಡ್ ರೇಜ್ ಪ್ರಕರಣದಲ್ಲಿ ಅವರಿಗೆ ವಿಧಿಸಲಾದ ಶಿಕ್ಷೆಯನ್ನು ಅನುಭವಿಸಲು ಹೆಚ್ಚಿನ ಸಮಯವನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, ಈ ವಿಷಯವನ್ನು ಭಾರತದ ಮುಖ್ಯ ನ್ಯಾಯಾಧೀಶರ ಮುಂದೆ ಪ್ರಸ್ತಾಪಿಸುವಂತೆ ಕೇಳಿತು.

ನವಜೋತ್ ಸಿಧು ಪರ ವಾದ ಮಂಡಿಸಿದ ಹಿರಿಯ ವಕೀಲ ಎ.ಎಂ ಸಿಂಘ್ವಿ, ಸುಪ್ರೀಂ ಕೋರ್ಟ್‌ನಲ್ಲಿ ವಿಷಯ ಪ್ರಸ್ತಾಪಿಸಲು ಮನವಿ ಮಾಡಿದರು ಆದರೆ ನ್ಯಾಯಾಲಯ ಅನುಮತಿ ನಿರಾಕರಿಸಿತು. ರಿಜಿಸ್ಟ್ರಿಗೆ ಶರಣಾಗಲು ಹೆಚ್ಚಿನ ಸಮಯ ಕೋರಿ ಪತ್ರ ನೀಡುವಂತೆ ಸಿಧುಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ರೀತಿ ಉಲ್ಲೇಖಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಪಟಿಯಾಲ ನಿವಾಸಿ ಗುರ್ನಾಮ್ ಸಿಂಗ್ ಸಾವಿಗೀಡಾದ 34 ವರ್ಷಗಳ ಹಿಂದಿನ ರಸ್ತೆ ಆಕ್ರೋಶ ಪ್ರಕರಣದಲ್ಲಿ ಪಂಜಾಬ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರಿಗೆ ಸುಪ್ರೀಂಕೋರ್ಟ್‌ ನಿನ್ನೆ, ಗುರುವಾರ ಒಂದು ವರ್ಷ ಶಿಕ್ಷೆ ವಿಧಿಸಿತ್ತು.
ಆದೇಶದಂತೆ ಪಂಜಾಬ್ ಪೊಲೀಸರು ಸಿಧು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಿದ್ದಾರೆ. ಈ ಹಿಂದೆ ಸಿಧುಗೆ 1000 ರೂಪಾಯಿ ದಂಡ ವಿಧಿಸಿ ಬಿಡುಗಡೆಗೊಳಿಸಲಾಗಿತ್ತು. ಇದೀಗ ಐಪಿಸಿ ಸೆಕ್ಷನ್ 323ರ ಅಡಿಯಲ್ಲಿ ಸಿಧುಗೆ ಗರಿಷ್ಠ ಶಿಕ್ಷೆ ವಿಧಿಸಲಾಗಿದೆ.

ಪ್ರಮುಖ ಸುದ್ದಿ :-   ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement