ಗುಜರಾತ್, ಹಿಮಾಚಲದಲ್ಲಿ ಕಾಂಗ್ರೆಸ್ ಸೋಲು ಕಾಣುತ್ತದೆ: ಪ್ರಶಾಂತ್ ಕಿಶೋರ್ ಭವಿಷ್ಯ

ನವದೆಹಲಿ: ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಬಿಜೆಪಿ ಆಡಳಿತವಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ “ಸನ್ನಿಹಿತ ಚುನಾವಣಾ ಸೋಲನ್ನು” ಎದುರಿಸುತ್ತಿದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಶುಕ್ರವಾರ ಪ್ರತಿಪಾದಿಸಿದ್ದಾರೆ.
ಉದಯಪುರದಲ್ಲಿ ನಡೆದ ಕಾಂಗ್ರೆಸ್ ಚಿಂತನ ಶಿಬಿರದ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ಪದೇ ಪದೇ ನನ್ನನ್ನು ಕೇಳಲಾಗುತ್ತಿದೆ. ನನ್ನ ದೃಷ್ಟಿಯಲ್ಲಿ, ಯಥಾಸ್ಥಿತಿಯನ್ನು ಮುಂದುವರಿಸುವುದು ಬಿಟ್ಟರೆ ಬೇರೆ ಅರ್ಥಪೂರ್ಣ ನಿರ್ಧಾರವನ್ನು ಶಿಬಿರದಲ್ಲಿ ಕೈಗೊಂಡಿಲ್ಲ. ಮುಂಬರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣಾ ಸೋಲಿನವರೆಗೂ ಈಗಿನ ಕಾಂಗ್ರೆಸ್ ನಾಯಕತ್ವಕ್ಕೆ ಅವಕಾಶ ನೀಡಲಾಗಿದೆ ಎಂದು ಪ್ರಶಾಂತ್ ಕಿಶೋರ್ ಮಾರ್ಮಿಕವಾಗಿ ಶುಕ್ರವಾರ ಟ್ವೀಟ್ ಮಾಡಿದ್ದಾರೆ.

ಚಿಂತನ ಶಿಬಿರದಲ್ಲಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಹುದ್ದೆಗಳನ್ನು ಕಾಯ್ದಿರಿಸುವ ಮತ್ತು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ‘ಭಾರತ್ ಜೋಡೋ ಯಾತ್ರೆ’ಯನ್ನು ಅಕ್ಟೋಬರ್ 2 ರಂದು ಆರಂಭಿಸುವುದಾಗಿ ಕಾಂಗ್ರೆಸ್‌ ಘೋಷಿಸಿದೆ.
ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುವ ಸಂಬಂಧ ಊಹಾಪೋಗಳು ಎದ್ದಿತ್ತು. ಎರಡು ವಾರಗಳ ಕಾಲ ಚರ್ಚೆಯ ನಂತರ ಏಪ್ರಿಲ್‌ನಲ್ಲಿ ಪಕ್ಷ ಸೇರುವುದಿಲ್ಲ ಎಂದು ಪ್ರಶಾಂತ್‌ ಕಿಶೋರ್‌ ಸ್ಪಷ್ಟಪಡಿಸಿದ್ದರು.
ಪ್ರಶಾಂತ್ ಕಿಶೋರ್ ಕಾಂಗ್ರೆಸ್‌ನಲ್ಲಿ ಹೆಚ್ಚು ಅಧಿಕಾರ ಮತ್ತು ಚುನಾವಣಾ ನಿರ್ವಹಣೆಯಲ್ಲಿ ಮುಕ್ತ ಹಸ್ತವನ್ನು ಬಯಸಿದ್ದರು ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement