ಬಳ್ಳಾರಿ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಕಬ್ಬಿಣದ ಅದಿರು ರಫ್ತಿಗೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಕರ್ನಾಟಕದ ಬಳ್ಳಾರಿ, ತುಮಕೂರು ಚಿತ್ರದುರ್ಗ ಜಿಲ್ಲೆಗಳ ಗಣಿಗಳಿಂದ ತೆಗೆದ ಕಬ್ಬಿಣದ ಅದಿರನ್ನು ರಫ್ತು ಮಾಡಲು ಗಣಿಗಾರಿಕೆ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಮತ್ತು ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಹಾಗೂ ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರದ ನಿಲುವನ್ನು ಗಮನಿಸಿ ಕಬ್ಬಿಣದ ಅದಿರು ರಫ್ತು ಮೇಲಿನ ನಿರ್ಬಂಧವನ್ನು ತೆಗೆದುಹಾಕಿತು. ಇದೇವೇಳೆ ಅಧಿಕಾರಿಗಳು ವಿಧಿಸಿರುವ ಷರತ್ತುಗಳನ್ನು ಗಮನಿಸುವಂತೆ ಸಂಸ್ಥೆಗಳಿಗೆ ಸೂಚಿಸಿದೆ.

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಈಗಾಗಲೇ ಅಗೆದ ಕಬ್ಬಿಣದ ಅದಿರಿನ ದಾಸ್ತಾನುಗಳನ್ನು ಮಾರಾಟ ಮಾಡಲು ಮೇಲ್ಮನವಿದಾರರಿಗೆ ಅನುಮತಿ ನೀಡುತ್ತೇವೆ. ಇ-ಹರಾಜನ್ನು ಆಶ್ರಯಿಸದೆ ನೇರ ಒಪ್ಪಂದಗಳನ್ನು ಮಾಡಿಕೊಳ್ಳುವ ಮೂಲಕ ಕಬ್ಬಿಣದ ಅದಿರು ಹಂಚಿಕೆಗೆ ಅನುಮತಿ ನೀಡುತ್ತೇವೆ ಎಂದು ಪೀಠ ಹೇಳಿದೆ.
ಕರ್ನಾಟಕದಿಂದ ಕಬ್ಬಿಣದ ಅದಿರು ರಫ್ತು ಮಾಡುವುದನ್ನು ಸುಪ್ರೀಂ ಕೋರ್ಟ್ 2012ರಲ್ಲಿ ನಿಷೇಧಿಸಿತ್ತು. ಪರಿಸರ ಅವನತಿಯನ್ನು ತಡೆಗಟ್ಟುವ ಉದ್ದೇಶದಿಂದ ಮತ್ತು ರಾಜ್ಯದ ಖನಿಜ ಸಂಪನ್ಮೂಲಗಳನ್ನು ಭವಿಷ್ಯದ ಪೀಳಿಗೆಗೆ ಸಂರಕ್ಷಿಸಲು ನಿಷೇಧ ಹೇರಲಾಗಿತ್ತು.

ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement