ಭಾರೀ ಮಳೆ: ಇಂದು ಧಾರವಾಡ ಜಿಲ್ಲೆಯಾದ್ಯಂತ ಶಾಲೆ-ಕಾಲೇಜುಗಳಿಗೆ ರಜೆ

ಧಾರವಾಡ: ಧಾರವಾಡ ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ಇಂದು ಮೇ 20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.

ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಇಂದು ಮೇ 20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮೇ 19ರಂದು ಇಡೀ ದಿನ ಮತ್ತು ರಾತ್ರಿ  ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ. ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ. ಜನ ಹಾಗೂ  ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

5 / 5. 2

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ನಿಮ್ಮ ಕಾಮೆಂಟ್ ಬರೆಯಿರಿ

advertisement