ತನಿಖೆ ನಂತರ ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್‌ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ

posted in: ರಾಜ್ಯ | 0

ಶಿವಮೊಗ್ಗ: ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ವಿಚಾರಣೆಗೆ ವಿಶೇಷ ತ್ವರಿತ ನ್ಯಾಯಾಲಯ ರಚನೆ ಮಾಡುವ ಚಿಂತನೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡರೆ ಆರೋಪಿಗಳ ಬಣ್ಣ ಬಯಲಿಗೆ ಬರಲಿದೆ. ಅಕ್ರಮದಲ್ಲಿ ಸಿಕ್ಕಿಬಿದ್ದವರು ಬಹಳ ವರ್ಷಗಳಿಂದ ಅಕ್ರಮದಲ್ಲಿ ತೊಡಗಿರುವುದು ತನಿಖೆ ವೇಳೆ ಬಹಿರಂಗಗೊಂಡಿದೆ. ಎಂದು ಹೇಳಿದರು.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಕೋರ್ಟ್​ ನೀಡುವ ತೀರ್ಪು ಗಮನಿಸಿ ಪಿಎಸ್​ಐ ನೇಮಕಾತಿಗೆ ಮರುಪರೀಕ್ಷೆ ದಿನಾಂಕವನ್ನು ನಿಗದಿ ಮಾಡುತ್ತೇವೆ. ಈ ಪ್ರಕರಣದಲ್ಲಿ ಯಾರ ಮುಲಾಜನ್ನೂ ನೋಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಕರಣದಲ್ಲಿ ಹಲವರನ್ನು ಬಂಧಿಸಿದ್ದೇವೆ. ಯಾರೋ ಏನೋ ಹೇಳುತ್ತಾರೆ ಎಂಬುದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್​ನ ಇಬ್ಬರು ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದಾರೆ. ಕಾಂಗ್ರೆಸ್​ ಸರ್ಕಾರದ ಅವಧಿಯಲ್ಲೂ ಹಗರಣ ನಡೆಸಿರುವ ಸಾಧ್ಯತೆ ಹೆಚ್ಚಿದೆ. ಇದಕ್ಕೆ ಕಾಂಗ್ರೆಸ್​ನವರು ಏನೆನ್ನುತ್ತಾರೆ ಎಂದು ಪ್ರಶ್ನಿಸಿದರು.
ಶಾಸಕ ಪ್ರಿಯಾಂಕ್​ ಖರ್ಗೆ ಸಾಕ್ಷ್ಯಾಧಾರ ಇದೆ ಎಂದು ಹೇಳುತ್ತಿದ್ದಾರೆ. ತನಿಖಾ ತಂಡಕ್ಕೆ ಕೊಡಿ ಕ್ರಮ ಕೈಗೊಳ್ಳುತ್ತೇವೆ ಎಂದರೆ ಬೆನ್ನು ತೋರಿಸಿ ಹೋಗುತ್ತಿದ್ದಾರೆ. ಅವರದ್ದು ಮಾಧ್ಯಮದ ಮುಂದೆ ಹೀರೋ ಆಗುವ ಪ್ರಯತ್ನವಷ್ಟೆ ಎಂದು ಆರಗ ಜ್ಞಾನೇಂದ್ರ ಹೇಳಿದರು.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ: ಹೆದ್ದಾರಿ ಅಧಿಕಾರಿ ವಿರುದ್ಧ ಸಿಬಿಐ ತನಿಖೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ