ಧಾರವಾಡದಲ್ಲಿ ಭೀಕರ ಅಪಘಾತ: ಏಳು ಮಂದಿ ಸಾವು, 11 ಜನರಿಗೆ ಗಾಯ

posted in: ರಾಜ್ಯ | 0

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಏಳು ಜನರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ.
ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.

advertisement

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ

2023-24 ನೇ ಸಾಲಿನ ಅಡ್ಮಿಷನ್ ಗಳು ಆರಂಭವಾಗಿವೆ

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 9535127775 , 9901837775 , 6364528715 , 0836-2775155

ಬಾಡ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಅಪಘಾತಕ್ಕೀಡಾದ ಕ್ರೂಸರ್ ನಲ್ಲಿ 20ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಇವರಲ್ಲಿ ಏಳು ಜನರು ಮೃತಪಟ್ಟಿದ್ದಾರೆ. 9 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿ ಮನ್ಸೂರು ಗ್ರಾಮದಿಂದ ಬೆನಕಟ್ಟಿ ಗ್ರಾಮಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ವಾಹನ ಡಿಕ್ಕಿಯಾಗಿದೆ. . ಮೃತರೆಲ್ಲರೂ ಮದುವೆ ಗಂಡಿನ ಸಂಬಂಧಿಕರು ಎಂದು ಹೇಳಲಾಗಿದ್ದು, ಅನನ್ಯ(14), ಹರೀಶ(13), ಶಿಲ್ಪಾ (34) ,ನೀಲವ್ವ(60) ಮಧುಶ್ರೀ(20), ಮಹೇಶ್ವರಯ್ಯ (11) ಹಾಗೂ ಶಂಭುಲಿಂಗಯ್ಯ (35) ಎಂದು ಗುರುತಿಸಲಾಗಿದೆ.
ಮದುವೆಗೂ ಮುನ್ನ ಬೆಳಗ್ಗೆ ನಿದಗದಿಯಲ್ಲಿ ನಡೆಯಬೇಕಿದ್ದ ಮತ್ತೊಂದು ದೇವರ ಕಾರ್ಯಕ್ಕಾಗಿ ಮಧ್ಯರಾತ್ರಿಯೇ ಸಂಬಂಧಿಗಳು ನಿಗದಿಗೆ ಹೊರಟಿದ್ದರು ಎಂದು ಹೇಳಲಾಗಿದೆ.
ಸ್ಥಳಕ್ಕೆ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರಾತ್ರಿ 1.30ರಿಂದ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಕೃಷ್ಣಕಾಂತ್ ಹೇಳಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಇಂದಿನ ಪ್ರಮುಖ ಸುದ್ದಿ :-   ಉರಿಗೌಡ, ನಂಜೇಗೌಡ ಸಿನೆಮಾ ನಿರ್ಮಾಣ ಕೈಬಿಟ್ಟ ಸಚಿವ ಮುನಿರತ್ನ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

5 / 5. ಒಟ್ಟು ವೋಟುಗಳು 1

advertisement

ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು

ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement