ನವದೆಹಲಿ:: ಸಾರ್ವಜನಿಕರ ಒತ್ತಡಕ್ಕೆ ಮಣಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಅಂತಾರಾಷ್ಟ್ರೀಯ ತೈಲ ಬೆಲೆ ಏರಿಕೆಯಿಂದ ಉಂಟಾಗಿರುವ ಇಂಧನ ಬೆಲೆಯಲ್ಲಿನ ಏರಿಕೆ ಕಡಿಮೆ ಮಾಡಲು ಪೆಟ್ರೋಲ್ ಮೇಲಿನ ಅಬಕಾರಿ ಸುಂಕದಲ್ಲಿ ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್ ಮೇಲೆ 6 ರೂಪಾಯಿ ಕಡಿತಗೊಳಿಸುವುದಾಗಿ ಶನಿವಾರ ಘೋಷಿಸಿದ್ದಾರೆ. .

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ಮತ್ತು ಡೀಸೆಲ್‌ನ ಮೇಲೆ ಲೀಟರ್‌ಗೆ 6 ಕಡಿಮೆ ಮಾಡುತ್ತಿದ್ದೇವೆ. ಇದು ಪ್ರತಿ ಲೀಟರ್‌ಗೆ ಪೆಟ್ರೋಲ್‌ಗೆ 9.5 ಮತ್ತು ಡೀಸೆಲ್‌ಗೆ 7 ರಷ್ಟು ಕಡಿಮೆ ಮಾಡುತ್ತದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಎಂದು ಟ್ವೀಟ್ ಮಾಡಿದ್ದಾರೆ.
ಎಲ್ಲ ರಾಜ್ಯ ಸರ್ಕಾರಗಳು, ವಿಶೇಷವಾಗಿ ಕೊನೆಯ ಸುತ್ತಿನಲ್ಲಿ (ನವೆಂಬರ್ 2021) ಕಡಿತವನ್ನು ಮಾಡದ ರಾಜ್ಯಗಳು ಸಹ ಇದೇ ರೀತಿಯ ಕಡಿತವನ್ನು ಜಾರಿಗೆ ತರಲು ಮತ್ತು ಸಾಮಾನ್ಯ ಜನರಿಗೆ ಪರಿಹಾರವನ್ನು ನೀಡಬೇಕು ಎಂದು ಅವರು ಹೇಳಿದ್ದಾರೆ.
ಅಲ್ಲದೆ, ದಾಖಲೆ ಮಟ್ಟಕ್ಕೆ ಏರುತ್ತಿರುವ ಅಡುಗೆ ಅನಿಲ ದರದಿಂದ ಉಂಟಾಗುವ ಹೊರೆಯನ್ನು ಸ್ವಲ್ಪಮಟ್ಟಿಗೆ ತಗ್ಗಿಸಲು ಸರ್ಕಾರವು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಒಂದು ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಪ್ರತಿ ಸಿಲಿಂಡರ್‌ಗೆ 200 ರೂಪಾಯಿಗಳನ್ನು ನೀಡುತ್ತದೆ.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ