ಭಾರತ ಕಬಡ್ಡಿ ತಂಡದ ಮಾಜಿ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಉದಯ ಚೌಟ ನಿಧನ

posted in: ರಾಜ್ಯ | 0

ಮಂಗಳೂರು: ಭಾರತೀಯ ಕಬಡ್ಡಿ ತಂಡದ ಮಾಜಿ ಆಟಗಾರ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಉದಯ ಚೌಟ ಅವರು ಶನಿವಾರ ಮುಂಜಾನೆ ಹೃದಯಾಘಾತದಿಂದ ನಿಧನರಾದರು.
ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆಯಲ್ಲಿ ವಾಸವಿದ್ದ ಉದಯ ಚೌಟ ಅವರು ಬ್ಯಾಂಕ್ ಆಫ್ ಬರೋಡಾದ ಸುರತ್ಕಲ್ ಶಾಖೆಯಲ್ಲಿ ಉಪ ಪ್ರಬಂಧಕರಾಗಿ ಕೆಲಸ ಮಾಡುತ್ತಿದ್ದರು.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ವಿದ್ಯಾಭ್ಯಾಸ ಮಾಡುತ್ತಿದ್ದಾಗಲೇ ನಾಲ್ಕು ವರ್ಷ ಅಂತರ್ ಕಾಲೇಜು ಕಬಡ್ಡಿ ಪಂದ್ಯಾಟದಲ್ಲಿ ಜಯಗಳಿಸಿದ್ದ ಉದಯ ಚೌಟ ಅವರು ಅಂತರ್ ವಿಶ್ವವಿದ್ಯಾನಿಲಯಕ್ಕೆ ಸೌತ್‌ಲೈನ್‌ಗೆ ಮಂಗಳೂರು ವಿಶ್ವ ವಿದ್ಯಾಲಯನ್ನು ಮೂರು ವರ್ಷ ಪ್ರತಿನಿಧಿಸಿದ್ದರು. ಅಲ್ಲದೆ ದ.ಕ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಉಪಾಧ್ಯಕ್ಷರೂ ಆಗಿದ್ದರು. 1993ರಲ್ಲಿ ಜ್ಯೂನಿಯರ್ ನ್ಯಾಷನಲ್‌ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದದ್ದರು. 2000ದಿಂದ 2008ರವರೆಗೆ ರಾಷ್ಟ್ರೀಯ ತಂಡದಲ್ಲಿದ್ದರು. ಬ್ಯಾಂಕ್ ಒಲಿಂಪಿಯಾಡ್ ತಂಡದ ನಾಯಕನಾಗಿ, ಬ್ಯಾಂಕ್ ಸ್ಪೋರ್ಟ್ಸ್ ಬೋರ್ಡ್ ತಂಡದ ನಾಯಕನಾಗಿ ಜವಾಬ್ದಾರಿ ನಿರ್ವಹಿಸಿದ್ದರು. ಇವರಿಗೆ ಹಲವು ಪ್ರಶಸ್ತಿಗಳು ಸಂದಿದ್ದವು.

ಏಕಲವ್ಯ ಪ್ರಶಸ್ತಿ ಪಡೆದ ಜಿಲ್ಲೆಯ ಪ್ರಥಮ ಕಬಡ್ಡಿ ಆಟಗಾರ: 2004ರಲ್ಲಿ ಭಾರತ-ಬಾಂಗ್ಲಾ ಟೆಸ್ಟ್ ಕಬಡ್ಡಿ ಪಂದ್ಯಾಟದಲ್ಲಿ 5 ಪಂದ್ಯಗಳನ್ನು ಜಯಿಸಿ ಉದಯ ಚೌಟ ಚಿನ್ನದ ಪದಕ ಪಡೆದಿದ್ದರು. ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆಗೆ ಕರ್ನಾಟಕ ಸರ್ಕಾರ ನೀಡುವ ಏಕಲವ್ಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಪ್ರಥಮ ಬಾರಿಗೆ ಪಡೆದ ಹೆಗ್ಗಳಿಕೆ ಅವರದ್ದು. 20 ವರ್ಷಗಳ ಕಾಲ ಕಬಡ್ಡಿ ಜೀವನದಲ್ಲಿ ಅಖಿಲ ಭಾರತ ಮಟ್ಟದಲ್ಲಿ 100ಕ್ಕೂ ಅಧಿಕ, ರಾಜ್ಯಮಟ್ಟದಲ್ಲಿ 300ಕ್ಕೂ ಅಧಿಕ ಪಂದ್ಯಾಟಗಳನ್ನು ಆಡಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಗುತ್ತಿಗೆದಾರರಿಂದ ಲಂಚ ಪಡೆದ ಆರೋಪ: ಹೆದ್ದಾರಿ ಅಧಿಕಾರಿ ವಿರುದ್ಧ ಸಿಬಿಐ ತನಿಖೆ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

advertisement

ನಿಮ್ಮ ಕಾಮೆಂಟ್ ಬರೆಯಿರಿ