ಶಾಪಿಂಗ್‌ ಕಾಂಪ್ಲೆಕ್ಸ್‌ನ 60‌ ಅಡಿ ‌ಎತ್ತರದಿಂದ ಕೆಳಗೆ ಜಿಗಿದ ಯುವಕ-ಯುವತಿ-ಇಬ್ಬರ ಸ್ಥಿತಿಯೂ ಚಿಂತಾಜನಕ

posted in: ರಾಜ್ಯ | 0

ಬೆಂಗಳೂರು: ಬ್ರಿಗೇಡ್‌ ರಸ್ತೆಯಲ್ಲಿರುವ ಶಾಪಿಂಗ್‌ ಕಾಂಪ್ಲೆಕ್ಸ್‌ವೊಂದಕ್ಕೆ ವೀಕೆಂಡ್‌ ಶಾಪಿಂಗ್‌ಗೆಂದು ಆಗಮಿಸಿದ ಯುವಕ ಮತ್ತು ಯುವತಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶನಿವಾರ ನಡೆದಿದೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು, ನಿಮ್ಹಾನ್ಸ್​ಗೆ ದಾಖಲಿಸಲಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಆತ್ಮಹತ್ಯೆಗೆ ಯತ್ನಿಸಿದ ಯುವಕ ಮತ್ತು ಯುವತಿಯನ್ನು ಕ್ರಿಸ್‌ ಮತ್ತು ಲಿಯಾ ಎಂದು ಗುರುತಿಸಲಾಗಿದೆ. ಇಬ್ಬರೂ ವೀಕೆಂಡ್‌ ಶಾಪಿಂಗ್‌ಗೆಂದು ಇಂದು, ಶನಿವಾರ ಮಧ್ಯಾಹ್ನ ಬ್ರಿಗೇಡ್‌ ರಸ್ತೆಯಲ್ಲಿರುವ ಶಾಪಿಂಗ್‌ ಕಾಂಪ್ಲೆಕ್ಸ್‌ಗೆ ಬಂದಿದ್ದರು. ಈ ವೇಳೆ ಎಲ್ಲರೂ ನೋಡುತ್ತಿರುವಾಗಲೇ ಫಿಫ್ತ್‌ ಅವೆನ್ಯೂ ಕಟ್ಟಡದಿಂದ ಸುಮಾರು 60‌ ಅಡಿ‌ ಎತ್ತರದಿಂದ ಕೆಳಗೆ ಹಾರಿದ್ದಾರೆ. ಇಬ್ಬರೂ ಗಂಭೀರ ಗಾಯಗೊಂಡಿದ್ದು, ತತ್‌ಕ್ಷಣ ನಿಮ್ಹಾನ್ಸ್‌ಗೆ ಸಾಗಿಸಲಾಗಿದೆ. ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.
ಕಬ್ಬನ್​ ಪಾರ್ಕ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಕುಮಟಾ: ಮೂರು ದಿನಗಳ ಕಾರ್ಯಾಚರಣೆ ನಂತರ ಸಮುದ್ರ ಪಾಲಾದ ಮತ್ತಿಬ್ಬರ ಶವ ಪತ್ತೆ
advertisement

ನಿಮ್ಮ ಕಾಮೆಂಟ್ ಬರೆಯಿರಿ