ಜ್ಞಾನವಾಪಿ ಮಸೀದಿಯಲ್ಲಿ ದೊರೆತ ಶಿವಲಿಂಗದ ಕುರಿತು ಆಕ್ಷೇಪಾರ್ಹ ಪೋಸ್ಟ್: ಪ್ರಾಧ್ಯಾಪಕನ ಬಂಧನ

ನವದೆಹಲಿ: ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಪತ್ತೆಯಾದ ಶಿವಲಿಂಗದ ಕುರಿತು ಆಕ್ಷೇಪಾರ್ಹ ಪೋಸ್ಟ್ ಮಾಡಿದ ದೆಹಲಿ ವಿಶ್ವವಿದ್ಯಾಲಯದ ಹಿಂದೂ ಕಾಲೇಜಿನ ಸಹ ಪ್ರಾಧ್ಯಾಪಕ ರತನ್ ಲಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ದೆಹಲಿ ಮೂಲದ ವಕೀಲರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ರಾತ್ರಿ ರತನ್ ಲಾಲ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ವಕೀಲ ವಿನೀತ್ ಜಿಂದಾಲ್ ಅವರು ತಮ್ಮ ದೂರಿನಲ್ಲಿ, ಲಾಲ್ ಇತ್ತೀಚೆಗೆ ಶಿವಲಿಂಗದ ವಿರುದ್ಧ ಅವಹೇಳನಕಾರಿ, ಪ್ರಚೋದನಕಾರಿ ಟ್ವೀಟ್ ಅನ್ನು ಹಂಚಿಕೊಂಡಿದ್ದಾರೆ ಎಂದು ಹೇಳೀದ್ದಾರೆ.

ರತನ್ ಲಾಲ್ ವಿರುದ್ದ ಭಾರತೀಯ ದಂಡ ಸಂಹಿತೆ 153ಎ (ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ದುಷ್ಪರಿಣಾಮ ಬೀರುವ ಕೃತ್ಯಗಳು) ಮತ್ತು 295ಎ (ಉದ್ದೇಶಪೂರ್ವಕ ಕೃತ್ಯ) ಕೇಸು ದಾಖಲಿಸಿ ಬಂಧಿಸಲಾಗಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement