ಬೆಂಗಳೂರು: ಧಾರವಾಡದ ಬಾಡ ಗ್ರಾಮದ ಬಳಿಯಲ್ಲಿ ಮದುವೆಗೆ ಹೊರಟಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿದ್ದು, ಮೃತಪಟ್ಟವರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.

ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಮನ್ಸೂರ ರೇವಣಸಿದ್ದೇಶ್ವರ ಮಠದಲ್ಲಿ ಶನಿವಾರ ನಡೆಯಲಿದ್ದ ನಿಗದಿ ಗ್ರಾಮದ ಯುವಕನ ಮದುವೆಯ ವೀಳ್ಯಶಾಸ್ತ್ರ ಮುಗಿಸಿಕೊಂಡು ಬರುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ರೂಸರ್ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎನ್ನಲಾಗಿದ್ದು, ನಿಧಾನವಾಗಿ ಚಾಲನೆ ಮಾಡುವಂತೆ ಕ್ರೂಸರ್‌ನಲ್ಲಿದ್ದವರು ಹೇಳಿದರೂ ಕೇಳದ ಚಾಲಕ ಅತಿ ವೇಗದ ಚಾಲನೆ ಮಾಡಿರುವುದೇ ಘಟನೆಗೆ ಕಾರಣ ಎಂದು ಗಾಯಾಳುಗಳು ಆರೋಪಿಸಿದ್ದರು.
ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ