ಬ್ರಹ್ಮಾವರ: ಕಾರಿನೊಳಗೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವಕ-ಯುವತಿ ಶವ ಪತ್ತೆ-ಪೆಟ್ರೋಲ್‌‌‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಶಂಕೆ

posted in: ರಾಜ್ಯ | 0

ಬ್ರಹ್ಮಾವರ: ಹೆಗ್ಗುಂಜೆ ಗ್ರಾಮ ಪಂಚಾಯತ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಬೆಂಕಿ ಹೊತ್ತಿಕೊಂಡು ಉರಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಕಾರಿನೊಳಗಿದ್ದ ಇಬ್ಬರು ಸಜೀವದಹನವಾಗಿದ್ದಾರೆ. ಇಬ್ಬರೂ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಭಾನುವಾರ ಮುಂಜಾನೆ 3:30 ರ ಸುಮಾರಿಗೆ ಘಟನೆ ನಡೆದಿರಬಹುದು ಎಂದು ಹೇಳಲಾಗಿದೆ. ಕಾರಿನಲ್ಲಿದ್ದ ಬೆಂಗಳೂರು ಆರ್.ಟಿ. ನಗರದ ಯಶವಂತ ಯಾದವ್‌ ಮತ್ತು ಜ್ಯೋತಿ ಎಂಬವರು ಸಜೀವವಾಗಿ ದಹನಗೊಂಡಿದ್ದಾರೆ. ಮುಂಜಾನೆ 3:30 ರ ಸುಮಾರಿಗೆ ಸ್ಥಳೀಯರು ಕಾರು ಹೊತ್ತಿ ಉರಿಯುತ್ತಿರುವದನ್ನು ಕಂಡು ಬೆಂಕಿ ನಂದಿಸಿದಾಗ ಇಬ್ಬರ ಶವ ಕಾರಿನೊಳಗೆ ಪತ್ತೆಯಾಗಿದೆ.

ಮೂರು ದಿನಗಳ ಹಿಂದಷ್ಟೇ ಇವರ ಮೇಲೆ ಬೆಂಗಳೂರಿನಲ್ಲಿ ನಾಪತ್ತೆ ದೂರು ದಾಖಲಾಗಿತ್ತು. ಶನಿವಾರ ಮಂಗಳೂರಿನಿಂದ ಹುಸೇನ್‌ ಎಂಬವರ ಸ್ವಿಫ್ಟ್‌ ಕಾರನ್ನು ಬಾಡಿಗೆ ಪಡೆದು ಇವರಿಬ್ಬರು ವಿವಿಧ ಸ್ಥಳಗಳಿಗೆ ಹೋಗಿ ಬಂದಿದ್ದಾರೆ ಎನ್ನಲಾಗಿದೆ.
ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಇವರಿಬ್ಬರು ಸಂಬಂಧಿಕರೇ ಅಥವಾ ಸ್ನೇಹಿತರೇ ಎಂಬುದು ತಿಳಿದು ಬಂದಿಲ್ಲ. ಘಟನೆ ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆ ನಡೆದಿದೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
ಓದಿರಿ :-   ಕರ್ನಾಟಕದಲ್ಲಿ 1 ಲಕ್ಷ ಎಲೆಕ್ಟ್ರಿಕ್ ವಾಹನಗಳ ನೋಂದಣಿ: ಸಚಿವ ಮುರುಗೇಶ್ ನಿರಾಣಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

advertisement

ನಿಮ್ಮ ಕಾಮೆಂಟ್ ಬರೆಯಿರಿ