ಭಟ್ಕಳ: ಆಟ ಆಡುತ್ತಿದ್ದಾಗ ಮಳೆ ನೀರಿನ ಕಾಲುವೆಗೆ ಬಿದ್ದು 4 ವರ್ಷದ ಮಗು ಸಾವು

posted in: ರಾಜ್ಯ | 0

ಭಟ್ಕಳ: ಮನೆಯ ಹಿಂದುಗಡೆ ಆಟವಾಡುತ್ತಿದ್ದ ಬಾಲಕ ಮಳೆ ನೀರಿನ ಕಾಲುವೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪಡುಶಿರಾಲಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.
ಮೃತ ಬಾಲಕನನ್ನು ವಿಜೇತ ನಾಯ್ಕ (4) ಎಂದು ಗುರುತಿಸಲಾಗಿದೆ. ಶುಕ್ರವಾರ ಅಂಗನವಾಡಿಗೆ ಹೋಗಿದ್ದ ಬಾಲಕ ಮಧ್ಯಾಹ್ನ ಮನೆಗೆ ಬಂದಿದ್ದಾನೆ. ತಾಯಿ ಮನೆಗೆಲಸದಲ್ಲಿರುವಾಗ ಮನೆಯ ಹಿಂದುಗಡೆ ಆಟವಾಡುತ್ತಿದ್ದ ಎಂದು ಹೇಳಲಾಗಿದೆ.

advertisement
ಐಸಿಎಸ್ ಮಹೇಶ ಪಿಯು ಸೈನ್ಸ್ ಕಾಲೇಜು, ಧಾರವಾಡ
ಅಡ್ಮಿಶನ್ ಗಾಗಿ ಇಂದೇ ಕರೆ ಮಾಡಿ
9535127775 / 9901837775 / 6364528715 / 08362775155 / https://icsmpucollege.com/

ಈ ಸಮಯದಲ್ಲಿ ಆಕಸ್ಮಿಕವಾಗಿ ಮಳೆ ನೀರು ಹರಿಯುವ ಕಾಲುವೆಗೆ ಬಿದ್ದ ನೀರು ಕುಡಿದಿದ್ದಾನೆ. ತಕ್ಷಣವೇ ಗಮನಿಸಿದ ತಾಯಿ ಶಿರಾಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾಳೆ. ಆದರೆ ಅಷ್ಟರಲ್ಲೇ ಬಾಲಕ ಮೃತ ಪಟ್ಟಿರುವ ಬಗ್ಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಮೃತ ಬಾಲಕನ ತಂದೆ ಗಣಪತಿ ಕೃಷ್ಣಾ ನಾಯ್ಕ ಮುರ್ಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ.

advertisement

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ಓದಿರಿ :-   ಕುಮಟಾ: ಮೂರು ದಿನಗಳ ಕಾರ್ಯಾಚರಣೆ ನಂತರ ಸಮುದ್ರ ಪಾಲಾದ ಮತ್ತಿಬ್ಬರ ಶವ ಪತ್ತೆ
advertisement

ನಿಮ್ಮ ಕಾಮೆಂಟ್ ಬರೆಯಿರಿ