ಏಕರೂಪ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ರಾಜ್ ಠಾಕ್ರೆ ಒತ್ತಾಯ

ಪುಣೆ: ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ (ಮೇ 22) ಪುಣೆಯಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಏಕರೂಪ ನಾಗರಿಕ ಸಂಹಿತೆ ಮತ್ತು ಜನಸಂಖ್ಯೆ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ.
ಏಕರೂಪ ನಾಗರಿಕ ಸಂಹಿತೆಯನ್ನು ಶೀಘ್ರವಾಗಿ ಜಾರಿಗೆ ತರಲು ನಾನು ಪ್ರಧಾನಿಯವರನ್ನು ವಿನಂತಿಸುತ್ತೇನೆ, ಜನಸಂಖ್ಯೆ ನಿಯಂತ್ರಣದ ಬಗ್ಗೆ ಕಾನೂನನ್ನು ತರಬೇಕು ಮತ್ತು ಔರಂಗಾಬಾದ್ ಹೆಸರನ್ನು ಸಂಭಾಜಿನಗರ ಎಂದು ಬದಲಾಯಿಸಬೇಕು” ಎಂದು ಠಾಕ್ರೆ ಒತ್ತಾಯಿಸಿದರು.

ಎಂಎನ್‌ಎಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ, ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಔರಂಗಾಬಾದ್‌ನ ಲೋಕಸಭಾ ಸ್ಥಾನವನ್ನು ಗೆಲ್ಲಲು ಎಐಎಂಐಎಂಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಆರೋಪಿಸಿದರು. ಎಐಎಂಐಎಂ ತನ್ನ ರೆಕ್ಕೆಗಳನ್ನು ಹರಡಲು ಅನುವಅಗಲು ಎಂವಿಎ ಆಡಳಿತವು ಕಾರಣವಾಗಿದೆ. ಎಐಎಂಐಎಂ ಅಭ್ಯರ್ಥಿ (ಇಮ್ತಿಯಾಜ್ ಜಲೀಲ್) ಶಿವಸೇನಾ ಅಭ್ಯರ್ಥಿಯನ್ನು (ಚಂದ್ರಕಾಂತ್ ಖೈರೆ) ಸೋಲಿಸಿ ಔರಂಗಾಬಾದ್‌ನಲ್ಲಿ ಸಂಸದರಾಗಿ ಆಯ್ಕೆಯಾಗಿರುವುದು ಆಘಾತಕಾರಿಯಾಗಿದೆ ಎಂದು ಹೇಳಿದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement