ಕೇಂದ್ರದ ಬೆನ್ನಲ್ಲೇ ಪೆಟ್ರೋಲ್-ಡೀಸೆಲ್ ಮೇಲಿನ ವ್ಯಾಟ್‌ ಇಳಿಸಿದ ಮಹಾರಾಷ್ಟ್ರ, ರಾಜಸ್ಥಾನ, ಒಡಿಶಾ, ಕೇರಳ

ನವದೆಹಲಿ: ಕೇಂದ್ರವು ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಗ್ರಾಹಕರಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರೆ ನೀಡಿದ ನಂತರ ಮಹಾರಾಷ್ಟ್ರ, ರಾಜಸ್ಥಾನ ಮತ್ತು ಕೇರಳ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿವೆ.
ಶಿವಸೇನೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಲೀಟರ್‌ಗೆ 2.08 ರೂ ಮತ್ತು ಡೀಸೆಲ್‌ಗೆ 1.44 ರೂ ಕಡಿತಗೊಳಿಸಿದೆ. ಈ ನಿರ್ಧಾರದಿಂದ ರಾಜ್ಯದ ಬೊಕ್ಕಸಕ್ಕೆ ವಾರ್ಷಿಕ 2,500 ಕೋಟಿ ರೂಪಾಯಿ ನಷ್ಟ ಉಂಟಾಗಲಿದೆ ಎಂದು ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ ತಿಳಿಸಿದೆ.

ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ರಾಜಸ್ತಾನ ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಮೇಲೆ 2.48 ರೂಪಾಯಿ ಮತ್ತು ಡೀಸೆಲ್ ಮೇಲೆ 1.16 ರೂಪಾಯಿಗಳಷ್ಟು ವ್ಯಾಟ್ ಅನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.
ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಇಂಧನ ತೆರಿಗೆಯಲ್ಲಿ ಮತ್ತಷ್ಟು ಕಡಿತವನ್ನು ತಮ್ಮ ಸರ್ಕಾರ ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೇರಳ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಮೇಲೆ ಕ್ರಮವಾಗಿ 2.41 ಮತ್ತು 1.36 ರೂಪಾಯಿಗಳ ತೆರಿಗೆಯನ್ನು ಕಡಿತಗೊಳಿಸುವುದಾಗಿ ಘೋಷಿಸಿದೆ, ಒಡಿಶಾ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕ್ರಮವಾಗಿ 2.23 ರೂಪಾಯಿ ಮತ್ತು 1.36 ರೂಪಾಯಿಗಳಷ್ಟು ಕಡಿಮೆ ಮಾಡಿದೆ.

ಪ್ರಮುಖ ಸುದ್ದಿ :-   ಮೋದಿ, ರಾಹುಲ್ ಗಾಂಧಿಯಿಂದ ನೀತಿ ಸಂಹಿತೆ ಉಲ್ಲಂಘನೆ ಆರೋಪ: ಉತ್ತರ ನೀಡಲು ಚುನಾವಣಾ ಆಯೋಗ ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement