ಪರಿಷತ್ ಚುನಾವಣೆ‌ : ಮೂರೂ ಪಕ್ಷಗಳಿಂದ ನಾಳೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ, ಅಚ್ಚರಿ ಅಭ್ಯರ್ಥಿಯೋ? ಹೈಕಮಾಂಡ್‌ಗೆ ಕಳುಹಿಸಿದ ಪಟ್ಟಿಗೆ ಮಾನ್ಯತೆಯೋ..?

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‍ನ ಏಳು ಸ್ಥಾನಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ 24 ಕೊನೆಯ ದಿನವಾಗಿದ್ದರೂ, ಯಾವುದೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಇದುವರೆಗೆ ಪ್ರಕಟಿಸಿಲ್ಲ. ಮೇ 17ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದರೂ ಈತನಕ ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿಲ್ಲ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು … Continued

ಅರ್ಜುನ್ ಸಿಂಗ್ ಘರ್ ವಾಪ್ಸಿ: ಮೂರು ವರ್ಷಗಳ ನಂತರ ತೃಣಮೂಲ ಕಾಂಗ್ರೆಸ್‌ಗೆ ಮರಳಿದ ಬಿಜೆಪಿ ಸಂಸದ..!

ನವದೆಹಲಿ: ಅರ್ಜುನ್ ಸಿಂಗ್ ಬಿಜೆಪಿ ತೊರೆದು ಭಾನುವಾರ ಅಖಿಲ ಭಾರತ ತೃಣಮೂಲ ಕಾಂಗ್ರೆಸ್‌ಗೆ ಮರಳಿದ್ದಾರೆ. ಅವರು ಬಿಜೆಪಿಯ ಪಶ್ಚಿಮ ಬಂಗಾಳ ಘಟಕದ ಉಪಾಧ್ಯಕ್ಷರಾಗಿದ್ದರು. 2019ರಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಭಾನುವಾರ ಮಧ್ಯಾಹ್ನ ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದರು. ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ … Continued

ದೆಹಲಿಯ ಕುತುಬ್ ಮಿನಾರ್ ಸಂಕೀರ್ಣ ಉತ್ಖನನದ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಕೇಂದ್ರ ಸಚಿವರ ಸ್ಪಷ್ಟನೆ

ನವದೆಹಲಿ: ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ ಉತ್ಖನನ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್‌ಐ) ಕೇಂದ್ರ ಸಂಸ್ಕೃತಿ ಸಚಿವಾಲಯ ಆದೇಶಿಸಿದೆ ಎಂಬ ವರದಿಗಳು ಹೊರಬಂದ ನಂತರ, ಸಂಸ್ಕೃತಿ ಸಚಿವ ಜಿ.ಕೆ. ರೆಡ್ಡಿ ಅಂತಹ ಯಾವುದೇ ನಿರ್ದೇಶನವನ್ನು ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ವರದಿಗಳ ಕುರಿತು ಪ್ರತಿಕ್ರಿಯಿಸಿದ ಜಿ.ಕೆ.ರೆಡ್ಡಿ, ‘ಅಂತಹ ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದಿದ್ದಾರೆ. ಕುತುಬ್ … Continued

ತಾಳಿ ಕಟ್ಟುವ ವೇಳೆ ಮದುವೆ ಬೇಡವೆಂದು ಹೈಡ್ರಾಮಾ ಮಾಡಿದ ವಧು…!

ಮೈಸೂರು: ಮದುವೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡು ವರ ಇನ್ನೇನು ತಾಳಿ ಕಟ್ಟಬೇಕು ಎನ್ನುವಾಗ ವಧು ತನಗೆ ಮದುವೆ ಬೇಡ ಎಂದು ಹೈಡ್ರಾಮಾ ನಡೆಸಿದ ಘಟನೆ ಮೈಸೂರಿನಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಇಲ್ಲಿನ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ವಧು ತಾಳಿ ಕಟ್ಟುವ ಸಮಯದಲ್ಲಿ ತಲೆ ಸುತ್ತಿ ಬಿದ್ದು ಹೈಡ್ರಾಮಾ ನಡೆಸಿದ್ದಾಳೆ. ಮೈಸೂರಿನ ಸುಣ್ಣದಕೇರಿ ಯುವತಿಯ ಮದುವೆ, ಎಚ್.ಡಿ … Continued

ಏಕರೂಪ ನಾಗರಿಕ ಸಂಹಿತೆ, ಜನಸಂಖ್ಯೆ ನಿಯಂತ್ರಣ ಕಾನೂನು ಜಾರಿಗೆ ತನ್ನಿ: ಪ್ರಧಾನಿ ಮೋದಿಗೆ ರಾಜ್ ಠಾಕ್ರೆ ಒತ್ತಾಯ

ಪುಣೆ: ಮಹಾರಾಷ್ಟ್ರ ನವನಿರ್ಮಾಣ ಸೇನೆ (MNS) ಮುಖ್ಯಸ್ಥ ರಾಜ್ ಠಾಕ್ರೆ ಭಾನುವಾರ (ಮೇ 22) ಪುಣೆಯಲ್ಲಿ ಸಾರ್ವಜನಿಕ ರ್ಯಾಲಿಯಲ್ಲಿ ಏಕರೂಪ ನಾಗರಿಕ ಸಂಹಿತೆ ಮತ್ತು ಜನಸಂಖ್ಯೆ ನಿಯಂತ್ರಣ ಕಾನೂನನ್ನು ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದ್ದಾರೆ. ಏಕರೂಪ ನಾಗರಿಕ ಸಂಹಿತೆಯನ್ನು ಶೀಘ್ರವಾಗಿ ಜಾರಿಗೆ ತರಲು ನಾನು ಪ್ರಧಾನಿಯವರನ್ನು ವಿನಂತಿಸುತ್ತೇನೆ, ಜನಸಂಖ್ಯೆ ನಿಯಂತ್ರಣದ ಬಗ್ಗೆ ಕಾನೂನನ್ನು … Continued

ಮಾರಣಾಂತಿಕ ಅನಿಲವಿದೆ, ಬೆಂಕಿಕಡ್ಡಿ ಹಚ್ಚಬೇಡಿ…: ಆತ್ಮಹತ್ಯೆ ಮಾಡಿಕೊಂಡ ಮಹಿಳೆ, ಪುತ್ರಿಯರಿಂದ ಚಿಲ್ಲಿಂಗ್ ನೋಟ್

ನವದೆಹಲಿ;ಶನಿವಾರ ದೆಹಲಿಯ ವಸಂತ ವಿಹಾರ ಪ್ರದೇಶದ ಫ್ಲಾಟ್‌ನಲ್ಲಿ ಒಂದೇ ಕುಟುಂಬದ ಮಹಿಳೆ ಮತ್ತು ಆಕೆಯ ಇಬ್ಬರು ಪುತ್ರಿಯರು ಅವರ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮೂವರು ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದು, ಇದು ಶಂಕಿತ ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಹೇಳಲಾಗಿದೆ. ಘಟನಾ ಸ್ಥಳದಿಂದ ಆತ್ಮಹತ್ಯೆ ಪತ್ರ ವಶಪಡಿಸಿಕೊಳ್ಳಲಾಗಿದೆ. ಡಿಸಿಪಿ ಸೌತ್ ವೆಸ್ಟ್ ಪ್ರಕಾರ, ವಸಂತ ಅಪಾರ್ಟ್‌ಮೆಂಟ್ … Continued

ಆಸ್ತಿ ಕಬಳಿಸಲು ʼಡಿ ಕಂಪೆನಿʼ ಜೊತೆ ಸಂಚು ರೂಪಿಸಿದ್ದ ನವಾಬ್ ಮಲಿಕ್: ಮುಂಬೈ ಕೋರ್ಟ್‌

ಮುಂಬೈ: ಮುಂಬೈನ ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ ಅಡಿ ಸ್ಥಾಪಿಸಲಾದ ವಿಶೇಷ ನ್ಯಾಯಾಲಯವು ಭೂಗತ ಪಾತಕಿ ದಾವೂದ್ ಇಬ್ರಾಹಿಂಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ವಿರುದ್ಧ ಜಾರಿ ನಿರ್ದೇಶನಾಲಯ (ಇ ಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಪರಿಗಣನೆಗೆ ತೆಗೆದುಕೊಂಡಿದೆ. ಪ್ರಕರಣವನ್ನು ಮುಂದುವರಿಸಲು ಸಾಕಷ್ಟು ಆಧಾರಗಳಿವೆ ಎಂಬುದನ್ನು ಗಮನಿಸಿದ ವಿಶೇಷ … Continued

ಇಂಧನ ತೆರಿಗೆ ಮತ್ತಷ್ಟು ಕಡಿತಗೊಳಿಸುವುದನ್ನು ನಾವು ಪರಿಗಣಿಸ್ತೇವೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸುವ ಕೇಂದ್ರದ ನಿರ್ಧಾರದ ನಂತರ ಇಂಧನ ತೆರಿಗೆಯನ್ನು ಮತ್ತಷ್ಟು ಕಡಿತಗೊಳಿಸುವುದನ್ನು ತಮ್ಮ ಸರ್ಕಾರವು ಪರಿಗಣಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ. ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಭಾಗವಹಿಸಲು ಸ್ವಿಸ್ ಸ್ಕೀ ರೆಸಾರ್ಟ್ ಪಟ್ಟಣವಾದ ದಾವೋಸ್‌ಗೆ ಭೇಟಿ ನೀಡುವ ಮುನ್ನ ಮಾಧ್ಯಮದವರ ಜೊತೆ … Continued

ಈಗ ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ನಡೆಸಲು ಎಎಸ್‌ಐಗೆ ಸರ್ಕಾರ ಆದೇಶ

ನವದೆಹಲಿ: ಜ್ಞಾನವಾಪಿ ಮಸೀದಿ ಸಮೀಕ್ಷೆಯ ನಂತರ, ದೆಹಲಿಯ ಕುತುಬ್ ಮಿನಾರ್ ಬಗ್ಗೆ ವಿವಾದ ಭುಗಿಲೆದ್ದಿತು. ಹಿಂದೂ ದೇವತೆಗಳ ವಿಗ್ರಹಗಳು ಅದರಲ್ಲಿ ಕಂಡುಬಂದಿವೆ ಮತ್ತು ಸ್ಮಾರಕವನ್ನು ಹಿಂದೂ ಚಕ್ರವರ್ತಿ ರಾಜಾ ವಿಕ್ರಮಾದಿತ್ಯ ನಿರ್ಮಿಸಿದ ಎಂದು ಹೇಳಲಾಗಿದೆ. ಈಗ ಕುತುಬ್ ಮಿನಾರ್‌ನಲ್ಲಿ ವಿಗ್ರಹಗಳ ಉತ್ಖನನ ಮತ್ತು ಪ್ರತಿಮಾ ಶಾಸ್ತ್ರವನ್ನು ನಡೆಸಲು ಸಂಸ್ಕೃತಿ ಸಚಿವಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ … Continued

ಧಾರವಾಡದ ಅಪಘಾತದಲ್ಲಿ ಸಾವಿನ ಸಂಖ್ಯೆ 9ಕ್ಕೆ ಏರಿಕೆ : ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಧಾರವಾಡದ ಬಾಡ ಗ್ರಾಮದ ಬಳಿಯಲ್ಲಿ ಮದುವೆಗೆ ಹೊರಟಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಮೃತಪಟ್ಟವರ ಸಂಖ್ಯೆ 9 ಕ್ಕೆ ಏರಿದ್ದು, ಮೃತಪಟ್ಟವರ ಕುಟುಂಬಸ್ಥರಿಗೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ … Continued