ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಶ್ರೀಶೈಲ ನಿಂಗಪ್ಪ ಗಡದಿನ್ನಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಅವರಿಗೆ ಟಿಕೆಟ್ ನೀಡಲಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಜೆಡಿಎಸ್ ಪಕ್ಷದಿಂದ ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಶ್ರೀಶೈಲ ನಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತೀರ್ಮಾನ ಮಾಡುತ್ತೇವೆ. ಎಲ್ಲಾ ಪಕ್ಷಗಳಲ್ಲೂ ಏರುಪೇರು ಸಹಜವಾಗಿದೆ. ಶರವಣ ಜೊತೆಯೂ ಈಗ ಚರ್ಚಿಸಿದೆ. ಅವರೂ ತುಂಬಾ ನಿರೀಕ್ಷೆ ಇಟ್ಕೊಂಡಿದ್ದಾರೆ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಜೂನ್ 13 ಕ್ಕೆ ಮತದಾನ ನಡೆಯಲಿದ್ದು, ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನಕ್ಕೆ ಅವಕಾಶವಿದೆ. ಜೂನ್ 4 ಕ್ಕೆ ದಕ್ಷಿಣ ಮತ್ತು ವಾಯುವ್ಯ ಪದವೀಧರರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ಕೆ.ಟಿ.ಶ್ರೀಕಂಠೇಗೌಡ ಮತ್ತು ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಅರುಣ್ ಶಹಾಪುರ ಮತ್ತು ಬಸವರಾಜ್ ಹೊರಟ್ಟಿರಿಂದ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ