ಮೇಕೆದಾಟು ಪಾದಯಾತ್ರೆ : ಸಿದ್ದರಾಮಯ್ಯ, ಡಿಕೆಶಿ ಸೇರಿ 29 ನಾಯಕರಿಗೆ ಕೋರ್ಟ್​ ಸಮನ್ಸ್

posted in: ರಾಜ್ಯ | 0

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ರಾಜ್ಯ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸೇರಿದಂತೆ ಕಾಂಗ್ರೆಸ್ ನಾಯಕರು ಖುದ್ದು ಹಾಜರಾಗುವಂತೆ ಕೋರ್ಟ್‌ ಸಮನ್ಸ್ ನೀಡಿದೆ.
. ಕಾಂಗ್ರೆಸ್ ಪ್ರಮುಖ ನಾಯಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದ ಡಿ.ಕೆ.ಸುರೇಶ್ ಸೇರಿ ಒಟ್ಟು 29 ನಾಯಕರಿಗೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಸಮನ್ಸ್ ಜಾರಿಗೊಳಿಸಲಾಗಿದ್ದು, ನಾಳೆ (ಮೇ 24) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದೆ.

advertisement

ಇದೇ ವರ್ಷದ ಜನವರಿಯಲ್ಲಿ ಕೊರೊನಾ ಪ್ರಕರಣಗಳು ರಾಜ್ಯದಲ್ಲಿ ಏರುಗತಿಯಲ್ಲಿದ್ದಾಗ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಕೈಗೊಂಡಿತ್ತು. ಬಳಿಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡ ನಂತರ ಪಾದಯಾತ್ರೆಯನ್ನು ಮೊಟಕುಗೊಳಿಸಲಾಗಿತ್ತು.
ಖುದ್ದು ಹಾಜರಿ ಅಥವಾ ಅಥವಾ ಸಂದರ್ಭಾನುಸಾರ ವಕೀಲರ ಮೂಲಕ ಮೇ 24 ಮಂಗಳವಾರ ಬೆಳಿಗ್ಗೆ ಉತ್ತರಿಸಲು 42 ನೇ ಹೆಚ್ಚುವರಿ ಮೆಟ್ರೋ‌ಪಾಲಿಟನ್ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.
ಹೈಕೋರ್ಟ್ ನಲ್ಲಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಬಳಿಕ ಪಾದಯಾತ್ರೆ ಗೆ ತಡೆ ಬಿದ್ದಿತ್ತು. ಇಪ್ಪತ್ತಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರ ವಿರುದ್ಧ ದೂರು ದಾಖಲಾಗಿತ್ತು.

ಕ್ಷಣ ಕ್ಷಣದ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಓದಿರಿ :-   ಪ್ರವೀಣ ನೆಟ್ಟಾರು​ ​ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ ಬಂಧನ...?

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ನಿಮ್ಮ ಕಾಮೆಂಟ್ ಬರೆಯಿರಿ

advertisement