ಶಿವಮೊಗ್ಗದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ತಾಯಿ…!

ಶಿವಮೊಗ್ಗ: 22 ವರ್ಷದ ತಾಯಿಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಲ್ಮಾಸ್ ಬಾನು ಎಂಬವರು ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಸೇರಿಯನ್ ಮೂಲಕ ಎರಡು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಆರೀಫ್ ಮತ್ತು ಅಲ್ಮಾ ಬಾನು ದಂಪತಿ ಭದ್ರಾವತಿ ತಾಲೂಕಿನ ತಡಸ ಗ್ರಾಮದವರಾಗಿದ್ದಾರೆ. ಆಲ್ಮಾಸ್ ಬಾನು ಸೋಮವಾರ ಬೆಳಗ್ಗೆ ಹೆರಿಗೆ ನೋವಿನಿಂದ ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದರು.
ನಾಲ್ವರು ಮಕ್ಕಳ ಪೈಕಿ ಒಂದೊಂದು ಮಗು 1.1 ಕೆಜಿ , 1.2 ಕೆಜಿ, 1.3 ಕೆಜಿ 1.8 ಕೆಜಿ ತೂಕ ಹೊಂದಿವೆ ಎಂದು ವೈದ್ಯರು ತಿಳಿಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ನಿಮ್ಮ ಕಾಮೆಂಟ್ ಬರೆಯಿರಿ

advertisement