ನನ್ನ ಕಥನ ಭಾಗವನ್ನು ಪಠ್ಯದಿಂದ ಕೈಬಿಡಿ : ಸರ್ಕಾರಕ್ಕೆ ಪತ್ರ ಬರೆದ ದೇವನೂರು ಮಹದೇವ

ಬೆಂಗಳೂರು: ಬಿಜೆಪಿ ಸರ್ಕಾರದ ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಾಹಿತಿ ದೇವನೂರ ಮಹಾದೇವ ತಮ್ಮ ಕಥವನ್ನು ಪಠ್ಯಕ್ಕೆ ಸೇರ್ಪಡೆಗೆ ಮಾಡುವುದು ಬೇಡ ಎಂದು ಪತ್ರ ಬರೆದಿದ್ದಾರೆ. ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ತಿಳಿದಿಲ್ಲ ಎಂದೇ ಅರ್ಥ ಎಂದು ಹೇಳಿದ್ದಾರೆ.
ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ನೂತನ ಪಠ್ಯ ಪರಿಷ್ಕರಣೆಯಲ್ಲಿಯೂ ಇದೇ ಆಗಿದೆ ಎಂದು ದೇವನೂರು ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎಂದು ಹೇಳುವ ಮೂಲಕ ತಮ್ಮದೇ ಜಾತಿಯವರನ್ನು ತುಂಬಿಕೊಂಡಿದ್ದಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಈ ಪಠ್ಯಗಳೆಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸ್ ಆಪ್, ಇಮೇಲ್, ಆನ್ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಡಿ.ಕೆ. ಶಿವಕುಮಾರ ವಿರುದ್ಧ ಎಫ್ ಐಆರ್ ದಾಖಲು

ಪಠ್ಯ ಪರಿಷ್ಕರಣೆಯ ವಾದ ವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷ. ಒಂದು ವೇಳೆ ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ದೇವನೂರು ಮಹದೇವ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement