ಹುಬ್ಬಳ್ಳಿ: ಧಾರವಾಡದ ಬಾಡಾದಲ್ಲಿ ನಡೆದ ಭೀಕರ ಅಪಘಾತ ಘಟನೆ ಮಾಸುವ ಮುನ್ನವೇ ಮತ್ತೊಂದು ಭೀಕರ ರಸ್ತೆ ಅಪಘಾತ ಹುಬ್ಬಳ್ಳಿಯಲ್ಲಿ ನಡೆದಿದ್ದು, ಅಪಘಾತದಲ್ಲಿ ಎಂಟು ಮಂದಿ ಅಸುನೀಗಿದ್ದಾರೆ ಹಾಗೂ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ.
ಸುಂದರವಾದ ಮತ್ತು ವಿಶಾಲವಾದ ಸ್ಥಳದಲ್ಲಿ ನಿಮ್ಮ ರಜಾದಿನಗಳನ್ನು ಆನಂದಿಸಿು
ಉತ್ತರ ಕರ್ನಾಟಕದ ಅತಿ ದೊಡ್ಡ ರೆಸಾರ್ಟ್ ಮತ್ತು ಅಡ್ವೆಂಚರ್ ಪಾರ್ಕ್
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಮತ್ತು ವಿಚಾರಿಸಿ: 98867 84189
ಹುಬ್ಬಳ್ಳಿಯ ಗೋಕುಲ್ ರಸ್ತೆಯ ರಾಯನಾಳ ರಸ್ತೆಯಲ್ಲಿ ತಡರಾತ್ರಿ 12:45ರ ಸುಮಾರಿಗೆ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು, ಕೊಲ್ಲಾಪುರದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಅಕ್ಕಿ ತುಂಬಿದ ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಲಾರಿ ಡ್ರೈವರ್, ಕ್ಲೀನರ್ ಹಾಗೂ ಬಸ್ನಲ್ಲಿದ್ದ ಆರು ಜನ ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದ್ದು ಹಲವರ ಸ್ಥಿತಿ ಗಂಭೀರವಾಗಿದೆ. 6 ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ನ್ಯಾಷನಲ್ ಬಸ್ ಚಾಲಕರಾದ ಅತುಆವಲ್ಲಾ, ಕ್ಲೀನರ್ ನಾಗರಾಜ, ಚಿಕ್ಕೋಡಿಯ ಬಾಬು ಸಾಹೇಬ್ ಹಾಗೂ ಮೈಸೂರಿನ ಮಹಮ್ಮದ್ ದಯ್ಯಾನ್ ಎಂದು ಗುರುತಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆಯಾಗಬೇಕಿದೆ. ಕಿಮ್ಸ್‌ನಲ ದಾಖಲಾಗಿರುವ ನಾಲ್ಕೈದು ಜನರ ಚಿಂತಾಜನಕವಿದೆ ಎಂದು ಆಸ್ಪತ್ರೆ ನಿರ್ದೇಶಕರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ | |
ಟೆಲಿಗ್ರಾಮ್ ಚಾನೆಲ್ ಸೇರಿ | |
ಫೇಸ್ ಬುಕ್ ಫಾಲೋ ಮಾಡಿ | |
ಗೂಗಲ್ ನ್ಯೂಸ್ ನಲ್ಲಿ ಸೇರಿ | |
ಟ್ವಿಟರ್ ನಲ್ಲಿ ಫಾಲೋ ಮಾಡಿ |
ನಿಮ್ಮ ಕಾಮೆಂಟ್ ಬರೆಯಿರಿ