ಕುವೆಂಪು ಪಠ್ಯ ಪರಿಷ್ಕರಣೆ ಮಾಡಿಲ್ಲ, ಅವರಿಗೆ ಅವಮಾನ ಮಾಡಿಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: 4ನೇ ತರಗತಿಯ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯ ಪುಸ್ತಕವನ್ನು ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯ ಸಮಿತಿ ಪರಿಷ್ಕರಣೆ ಮಾಡಿದೆ ಎಂಬ ವಿಚಾರ ಸತ್ಯಕ್ಕೆ ದೂರವಾದದ್ದು ಎಂದು ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ.
ಕುವೆಂಪು ಅವರ ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ. ಅವರ ಪಠ್ಯವನ್ನು ಪರಿಷ್ಕರಣೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ ಕುವೆಂಪು ಪಠ್ಯದ ಗೊಂದಲ ನಿವಾರಣೆ ಮಾಡಿದೆ.

ವಾಸ್ತವವಾಗಿ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕವನ್ನು ರೋಹಿತ್ ಚಕ್ರತೀರ್ಥ ಸಮಿತಿಯವರು ಪರಿಷ್ಕರಿಸಿಲ್ಲ. ಬರಗೂರು ರಾಮಚಂದ್ರಪ್ಪ ಅವರ ಸಮಿತಿಯು 2017-18ನೇ ಸಾಲಿನಲ್ಲಿ ಪರಿಷ್ಕರಿಸಿದ್ದ 4ನೇ ತರಗತಿ ಪರಿಸರ ಅಧ್ಯಯನ ಅಭ್ಯಾಸ ಸಹಿತ ಪಠ್ಯಪುಸ್ತಕದ ಪ್ರತಿಯೊಬ್ಬರೂ ವಿಶಿಷ್ಟ ಎಂಬ ಪಾಠದಲ್ಲಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಶೀರ್ಷಿಕೆ ಅಡಿಯಲ್ಲಿ ಇದ್ದ – 9 ಸಾಲುಗಳ ವಿಷಯಾಂಶವನ್ನು 2022-23ನೇ ಸಾಲಿನ ಪರಿಸರ ಅಧ್ಯಯನ ಪಠ್ಯಪುಸ್ತಕದಲ್ಲೂ ಯಾವುದೇ ಬದಲಾವಣೆ ಇಲ್ಲದೆ ಮುಂದುವರಿಸಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.
ಕುವೆಂಪು ಅವರ ಬಗ್ಗೆ ಇದ್ದ ವಿಷಯವನ್ನು ಕೈಬಿಟ್ಟು ರಾಷ್ಟ್ರಕವಿಗೆ ಅವಮಾನ ಮಾಡಲಾಗಿದೆ ಎಂಬ ಸಂಗತಿ ಸತ್ಯಕ್ಕೆ ದೂರವಾದದ್ದು ಎಂದು ಕರ್ನಾಟಕ ಪಠ್ಯ ಪುಸ್ತಕ ಸಂಘದ ವ್ಯವಸ್ಥಾಪಕ ನಿರ್ದೇಶಕರು ಸಹ ಸ್ಪಷ್ಟನೆ ನೀಡಿದ್ದಾರೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್‌ ಆಡಳಿತ ಬಂದ ನಂತರ ಅಪರಾಧಗಳು ಹೆಚ್ಚಳ, ವಿಧಾನಸೌಧದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ.. ಕಾಂಗ್ರೆಸ್‌ ಅನ್ನು ತಿರಸ್ಕರಿಸಬೇಡವೇ : ಶಿರಸಿಯಲ್ಲಿ ಮತದಾರರಿಗೆ ಮೋದಿ ಪ್ರಶ್ನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement