ಭ್ರಷ್ಟಾಚಾರ ಆರೋಪದ ಮೇಲೆ ಪಂಜಾಬ್ ಸಚಿವನ ವಜಾಗೊಳಿಸಿದ ನಂತರ ಬಂಧನ

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಭ್ರಷ್ಟಾಚಾರದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ರಾಜ್ಯ ಸಂಪುಟದಿಂದ ವಜಾ ಮಾಡಿರುವುದಾಗಿ ಮಂಗಳವಾರ ಹೇಳಿದ್ದಾರೆ.
ಅವರನ್ನು ಪದಚ್ಯುತಗೊಳಿಸಿದ ನಂತರ, ಸಿಂಗ್ಲಾ ಅವರನ್ನು ಭ್ರಷ್ಟಾಚಾರ ವಿರೋಧಿ ಬ್ಯೂರೋ ಬಂಧಿಸಿತು. ನಾನು ಆ ಸಚಿವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದೇನೆ, ಎಎಪಿ ಭ್ರಷ್ಟಾಚಾರದ ವಿರುದ್ಧ ಶೂನ್ಯ-ಸಹಿಷ್ಣು ನೀತಿಯಂತೆ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದೇನೆ ಮತ್ತು ಅವರ ವಿರುದ್ಧ ಪ್ರಕರಣ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡುತ್ತಿದ್ದೇನೆ. ಅವರು ತಮ್ಮ ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಮತ್ತು ಅದನ್ನು ಒಪ್ಪಿಕೊಂಡಿದ್ದಾರೆ ಎಂದು ಮಾನ್ ಹೇಳಿದರು.

ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ. ಅವರನ್ನು ಸಂಪುಟದಿಂದ ಕೈಬಿಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ. ವಿಜಯ್ ಸಿಂಗ್ಲಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
ಟೆಂಡರ್‌ಗಾಗಿ ಸಚಿವರು ಶೇಕಡಾ ಒಂದರಷ್ಟು ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದಾರೆ ಎಂದು ತಿಳಿದ ನಂತರ ಭಗವಂತ್ ಮಾನ್ ಅವರು ಈ ನಿರ್ಧಾರ ಕೈಗೊಂಡಿದ್ದೇನೆ. ಸಿಂಗ್ಲಾ ತಪ್ಪುಗಳನ್ನು ಒಪ್ಪಿಕೊಂಡಿದ್ದಾರೆ ಎಂದು ಮಾನ್ ಹೇಳಿದ್ದಾರೆ.

ಪ್ರಮುಖ ಸುದ್ದಿ :-   ವೀಡಿಯೊ...| ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿ ರಾಮಲಲ್ಲಾ ದರ್ಶನ ಪಡೆದ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್

https://twitter.com/AamAadmiParty/status/1529011392741011457?ref_src=twsrc%5Etfw%7Ctwcamp%5Etweetembed%7Ctwterm%5E1529011392741011457%7Ctwgr%5E%7Ctwcon%5Es1_&ref_url=https%3A%2F%2Fwww.indiatoday.in%2Findia%2Fstory%2Fpunjab-health-minister-vijay-singla-removed-corruption-charges-1953427-2022-05-24
ರಾಜ್ಯದಲ್ಲಿ ಹಿಂದಿನ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮಾನ್, ಅವರ ಹಿಂದಿನವರು ಭ್ರಷ್ಟರನ್ನು ರಕ್ಷಿಸಿದ್ದಾರೆ. ಆದರೆ, ಈಗ ಪಂಜಾಬ್‌ನಲ್ಲಿ ಇಂತಹವುಗಳನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.
‘‘ಪ್ರತಿ ಟೆಂಡರ್‌ಗೆ ಶೇ.1ರಷ್ಟು ಕಮಿಷನ್‌ ಕೇಳುತ್ತಿದ್ದ ನನ್ನ ಸರಕಾರದ ಸಚಿವರೊಬ್ಬರ ಪ್ರಕರಣ ನನ್ನ ಗಮನಕ್ಕೆ ಬಂದಿತ್ತು. ನಾನು ಅದನ್ನು ಗಂಭೀರವಾಗಿ ತೆಗೆದುಕೊಂಡೆ. ಯಾರಿಗೂ ಗೊತ್ತಿರಲಿಲ್ಲ. ನಾನು ಬಯಸಿದ್ದರೆ ಅದನ್ನು ಮುಚ್ಚಿ ಹಾಕಬಹುದಿತ್ತು. ಆದರೆ ಹಾಗೆ ಮಾಡಿದರೆ ನನ್ನನ್ನು ನಂಬಿದ ಜನರ ನಂಬಿಕೆಯನ್ನು ನಾನು ದ್ರೋಹ ಮಾಡಿದಂತಾಗಿತ್ತಿತ್ತು ಎಂದು ಅವರು ಹೇಳಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement