ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆಗಳು, ಒಬ್ಬ ಪೊಲೀಸ್‌ ಸಿಬ್ಬಂದಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಪಾಕಿಸ್ತಾನಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆಗೈದಿವೆ. ಗುಂಡಿನ ಚಕಮಕಿಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ.
ಪೊಲೀಸರ ಪ್ರಕಾರ, ಬಾರಾಮುಲ್ಲಾದ ಕ್ರೀರಿ ಪ್ರದೇಶದ ನಜೀಭಟ್ ಕ್ರಾಸಿಂಗ್‌ನಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ, ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ಅಡಗಿ ಕುಳಿತಿದ್ದ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದ ಬಳಿಕ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ಗೆ ತಿರುಗಿತು. ಭದ್ರತಾ ಪಡೆಗಳು ಮೂವರು ಉಗ್ರರನ್ನು ಕೊಂದು ಹಾಕಿದ್ದಾರೆ.

advertisement

“ಮೂರು ಪಾಕಿಸ್ತಾನಿ ಭಯೋತ್ಪಾದಕರು ಕೊಲ್ಲಲ್ಪಟ್ಟರು. ಈ ಆಕಸ್ಮಿಕ ಎನ್‌ಕೌಂಟರ್‌ನಲ್ಲಿ ಒಬ್ಬ ಜೆಕೆಪಿ ಸಿಬ್ಬಂದಿಯೂ ಹುತಾತ್ಮರಾದರು. ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ಐಜಿಪಿ ಟ್ವೀಟ್ ಮಾಡಿದ್ದಾರೆ.
ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಕೂಂಬಿಂಗ್ ಮತ್ತು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ಟೆಲಿಗ್ರಾಮ್ ಚಾನೆಲ್ ಸೇರಿ
ವಾಟ್ಸಾಪ್ ಗ್ರೂಪ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

/ 5. ಒಟ್ಟು ವೋಟುಗಳು

ಓದಿರಿ :-   ಇಂದಿನಿಂದ ಕಾರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ಕೋವಿಡ್‌-19 ಲಸಿಕೆ ಲಭ್ಯ

ನಿಮ್ಮ ಕಾಮೆಂಟ್ ಬರೆಯಿರಿ

advertisement