ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ: ಶ್ರೀನಗರದಲ್ಲಿ ಬೆಂಬಲಿಗರಿಂದ ಪೊಲೀಸರ ಜೊತೆ ಘರ್ಷಣೆ

ಶ್ರೀನಗರ: ಬುಧವಾರ, ಮೇ 25 ರಂದು ಭಯೋತ್ಪಾದನೆಗೆ ಹಣ ಸಹಾಯ ಮಾಡಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಯಾಸಿನ್ ಮಲಿಕ್‌ಗೆ ದೆಹಲಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ತೀರ್ಪಿನ ನಂತರ, ಶ್ರೀನಗರದ ಮೈಸುಮಾ ಪ್ರದೇಶದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಬೆಂಬಲಿಗರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ನಡುವೆ ಘರ್ಷಣೆ ನಡೆಯಿತು.
ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು.ಶ್ರೀನಗರದ ಮೈಸುಮಾ ಮತ್ತು ಡೌನ್‌ಟೌನ್ ಪ್ರದೇಶಗಳಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಈ ತಿಂಗಳ ಆರಂಭದಲ್ಲಿ, ಯಾಸಿನ್ ಮಲಿಕ್ ಅವರು ಭಯೋತ್ಪಾದನಾ ನಿಧಿ ಪ್ರಕರಣದಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಸೇರಿದಂತೆ ಎಲ್ಲಾ ಆರೋಪಗಳನ್ನು ಒಪ್ಪಿಕೊಂಡಿದ್ದರು. ಸೆಕ್ಷನ್ 16 (ಭಯೋತ್ಪಾದನಾ ಕೃತ್ಯ) ಮತ್ತು ಸೆಕ್ಷನ್ 17 (ಭಯೋತ್ಪಾದಕ ಕೃತ್ಯಗಳಿಗೆ ನಿಧಿ ಸಂಗ್ರಹಿಸುವುದು) ಸೇರಿದಂತೆ ತನ್ನ ವಿರುದ್ಧ ಹೊರಿಸಲಾದ ಆರೋಪಗಳಿಗೆ ತಾನು ಪ್ರಶ್ನೆ ಮಾಡುವುದಿಲ್ಲ ಎಂದು ಮಲಿಕ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಮಲಿಕ್ ವಿರುದ್ಧ ಯುಎಪಿಎ ಸೆಕ್ಷನ್ 18 (ಭಯೋತ್ಪಾದಕ ಕೃತ್ಯಕ್ಕೆ ಪಿತೂರಿ), ಮತ್ತು 20 (ಭಯೋತ್ಪಾದಕ ಗುಂಪು ಅಥವಾ ಸಂಘಟನೆಯ ಸದಸ್ಯ) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ) ಮತ್ತು 124-ಎ (ದೇಶದ್ರೋಹ) ಪ್ರಕರಣಗಳು ದಾಖಲಾಗಿತ್ತು.
ಮೇ 19 ರಂದು ವಿಶೇಷ ನ್ಯಾಯಾಧೀಶ ಪ್ರವೀಣ್ ಸಿಂಗ್ ಅವರು ಯಾಸಿನ್‌ ಮಲ್ಲಿಕ್‌ ದೋಷಿ ಎಂದು ಘೋಷಿಸಿದರು ಮತ್ತು ಇಂದು, ಬುಧವಾರ ಶಿಕ್ಷೆ ಪ್ರಕಟಿಸಿದರು.

ಇಂದಿನ ಪ್ರಮುಖ ಸುದ್ದಿ :-   ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಸಾವು, ಅದರಲ್ಲಿ 12 ನವಜಾತ ಶಿಶುಗಳು

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ.

(1. ಚೆನ್ನಾಗಿಲ್ಲ. 2. ಸಾಧಾರಣ. 3. ಪರವಾಗಿಲ್ಲ. 4. ಉತ್ತಮ . 5. ಅತ್ಯುತ್ತಮ)

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ

ಕನ್ನಡಿ ನ್ಯೂಸ್ ನ ದಿನದ ಪ್ರಮುಖ ಸುದ್ದಿಗಳು ಮತ್ತು ಮಾಹಿತಿಗಾಗಿ
ವಾಟ್ಸಾಪ್ ಗ್ರೂಪ್ ಸೇರಿ
ಟೆಲಿಗ್ರಾಮ್ ಚಾನೆಲ್ ಸೇರಿ
ಫೇಸ್ ಬುಕ್ ಫಾಲೋ ಮಾಡಿ
ಗೂಗಲ್ ನ್ಯೂಸ್ ನಲ್ಲಿ ಸೇರಿ
ಟ್ವಿಟರ್ ನಲ್ಲಿ ಫಾಲೋ ಮಾಡಿ
advertisement